ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ: ದಳಪತಿಗಳ 'ಬುಟ್ಟಿ'ಯಲ್ಲಿ ಆಪರೇಷನ್ ಹಸ್ತ; ಶಾಸಕರ ಬೇಟೆಯಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಜೆಡಿಎಸ್ 19 ಶಾಸಕರ ಪೈಕಿ 13 ಮಂದಿಯನ್ನು ಬೇಟೆಯಾಡುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಜೆಡಿಎಸ್ 19 ಶಾಸಕರ ಪೈಕಿ 13 ಮಂದಿಯನ್ನು ಬೇಟೆಯಾಡುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯಲ್ಲಿ ಜೆಡಿಎಸ್ ನ 7 ಅಥವಾ 8 ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಅಧಿಕಾರ ವಿರೋಧಿ ಕಾನೂನಿನ ಪ್ರಕಾರ, ಒಂದು ಪಕ್ಷದ ಒಟ್ಟು ಶಾಸಕರಲ್ಲಿ ಮೂರನೇ ಎರಡರಷ್ಟು ಮಂದಿ ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳ್ಳಲು ಅವಕಾಶವಿದೆ, ಹೀಗಾಗಿ ಜೆಡಿಎಸ್ ನ 13 ಶಾಸಕರನ್ನು  ಕಾಂಗ್ರೆಸ್ ಗೆ ಸೆಳೆಯುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಶಾಸಕರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳು ಮತ್ತು ಹಿರಿಯ ನಾಯಕರಿಗೆ ನೀಡಿದ್ದಾರೆ. ಹನೂರು ಜೆಡಿಎಸ್ ಶಾಸಕ ಎಂ ಆರ್ ಮಂಜುನಾಥ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರು ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್, ದೇವಗಿರಿ ಶಾಸಕಿ ಕರೆಮ್ಮ ಜಿ ನಾಯ್ಕ ಸೇರಿದಂತೆ 4 ರಿಂದ 5 ಶಾಸಕರು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಅಸಮಾಧಾನಗೊಂಡಿದ್ದು ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ಕಾಂಗ್ರೆಸ್ ಗೆ ಕರೆ ತರಲು ಸಚಿವ ಹಾಗೂ ಸಿಎಂ ಸಿದ್ದರಾಮಯ್ಯ ಆವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರಿಗೆ ಟಾಸ್ಕ್ ನೀಡಲಾಗಿದೆ ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಬಿ.ಸುರೇಶ್ ಬಾಬು ಅವರ ಮನವೊಲಿಸುವ ಕಾರ್ಯವನ್ನು ಜಿಲ್ಲಾ ಸಚಿವ ಡಾ.ಜಿ.ಪರಮೇಶ್ವರ ಹಾಗೂ ನವದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ವಹಿಸಲಾಗಿದೆ.

ಆದರೆ ಸುರೇಶ್ ಬಾಬು ಅವರು ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಕಾರಣ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು, ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ಮೈತ್ರಿಯು ತಮ್ಮ 19 ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ತಂತ್ರದ ಭಾಗವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com