ಬೆಳಗಾವಿ: ಲೋಕಸಭೆ ಟಿಕೆಟ್ ಗಾಗಿ ಲಾಬಿ ಮಾಡುತ್ತಿಲ್ಲ- ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಪಕ್ಷದ ಟಿಕೆಟ್‌ಗಾಗಿ ಲಾಬಿ ಮಾಡುತ್ತಿಲ್ಲ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ  ಹೇಳಿದ್ದಾರೆ.
ಅಣ್ಣಾ ಸಾಹೇಬ್ ಜೊಲ್ಲೆ
ಅಣ್ಣಾ ಸಾಹೇಬ್ ಜೊಲ್ಲೆ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಪಕ್ಷದ ಟಿಕೆಟ್‌ಗಾಗಿ ಲಾಬಿ ಮಾಡುತ್ತಿಲ್ಲ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ  ಹೇಳಿದ್ದಾರೆ.

2024ರ ಚುನಾವಣೆ ಮತ್ತು ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವುದು ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಷಯವಾಗಿದೆ.  ಚಿಕ್ಕೋಡಿಯಲ್ಲಿ ಗುರುವಾರ ಮಾತನಾಡಿದ ಅವರು, ತಮ್ಮ ಕ್ಷೇತ್ರದಿಂದ ಪಕ್ಷದ ಟಿಕೆಟ್‌ಗಾಗಿ ಯಾವುದೇ ಪೈಪೋಟಿ ಇಲ್ಲ, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದಿದ್ದಾರೆ.

ಚಿಕ್ಕೋಡಿ ಕ್ಷೇತ್ರಕ್ಕೆ ಪಕ್ಷದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು. ಕಳೆದ ಬಾರಿ ಟಿಕೆಟ್‌ಗಾಗಿ ನಡೆದ ಪೈಪೋಟಿಯನ್ನು ಸ್ಮರಿಸಿದ ಅವರು, ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಮೊದಲು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪಕ್ಷದ ಟಿಕೆಟ್‌ಗಾಗಿ ಕನಿಷ್ಠ 20 ಆಕಾಂಕ್ಷಿಗಳು ಇದ್ದರು ಎಂದರು.

ಸ್ಪರ್ಧಿಸಲು ಟಿಕೆಟ್‌ಗಾಗಿ ಬೇಡಿಕೆ ಇಡುವ ಹಕ್ಕು ಎಲ್ಲರಿಗೂ ಇದೆ, ಅಭ್ಯರ್ಥಿಗಳು ಟಿಕೆಟ್‌ಗೆ ಬೇಡಿಕೆಯಿಡಲು ಸ್ವತಂತ್ರರು ಆದರೆ ಅಂತಿಮವಾಗಿ ನಿರ್ಧಾರ ಮಾಡುವುದು ಪಕ್ಷದ ಹೈಕಮಾಂಡ್‌ ಎಂದು ಹೇಳಿದರು.

ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದಿದ್ದಲ್ಲಿ ಬಿಜೆಪಿ ಮುಖಂಡ ರಮೇಶ ಕತ್ತಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಯೋಚನೆಯಲ್ಲಿದ್ದಾರೆ ಎಂಬ ವರದಿಗೆ ಪ್ರತಿಕ್ರಿಯಿಸಿದ ಜೊಲ್ಲೆ, ಕತ್ತಿ ಅವರ ವೈಯಕ್ತಿಕ ವಿಚಾರ ಏನೆಂದು ನನಗೆ ತಿಳಿದಿಲ್ಲ ಎಂದು ಹೇಳಿದರು. ಕತ್ತಿ ಬಿಜೆಪಿಯಲ್ಲೇ ಉಳಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com