ಐಟಿ ದಾಳಿಯಲ್ಲಿ ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು: ಡಿಕೆ.ಶಿವಕುಮಾರ್

ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಸಂಬಂಧ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಸಂಬಂಧ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಭ್ರಷ್ಟಾಚಾರವನ್ನೇ ಬಿಜೆಪಿ ನಡೆಸುತ್ತಿದೆ. ಭ್ರಷ್ಟಾಚಾರದ ಆಧಾರ ಸ್ತಂಭವೇ ಬಿಜೆಪಿಯಾಗಿದೆ. ಹೀಗಾಗಿಯೇ ರಾಜ್ಯದ ಜನತೆ ಅವರನ್ನು ತಿರಸ್ಕರಿಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು. ಈ ಹಣಕ್ಕೂ ಕಾಂಗ್ರೆಸ್ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ನಮಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ದಾಳಿಯ ವೇಳೆ ಐಟಿ ಅಧಿಕಾರಿಗಳು ಸಾಕಷ್ಟು ಪುಸ್ತಕಗಳು ಮತ್ತು ಡೈರಿಗಳನ್ನು ಪತ್ತೆ ಮಾಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಸತ್ಯಗಳು ಹೊರಬರುತ್ತವೆ ಎಂದು ತಿಳಿಸಿದರು.

ಬಿಜೆಪಿ ನಾಯಕರೂ ಕೂಡ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭವಾಗಲಿ. ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಇಲೇ ವೇಳೆ ತಮ್ಮನ್ನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ಸ್ ಎಂಬ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯೆ ನೀಡಿ, ಭ್ರಷ್ಟಾಚಾರದ ಆಧಾರಸ್ತಂಭವೇ ಬಿಜೆಪಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಕಚೇರಿಯಿಂದ ಹೈಕಮಾಂಡ್‌ಗೆ 2,000 ಕೋಟಿ ಹಣ ಹೋಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿ ಎಂದು ಶಾಸಕರು ಮತ್ತು ಮಾಜಿ ಸಚಿವರಿಗೆ ನಾನು ಕೇಳಬೇಕೇ ಎಂದು ವ್ಯಂಗ್ಯವಾಡಿದರು.

ಅಕ್ಟೋಬರ್ 12ರಂದು ಐಟಿ ಅಧಿಕಾರಿಗಳು ವಿವಿಧ ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆಸಿದರು ಮತ್ತು ಶೋಧ ಕಾರ್ಯ ಪ್ರಾರಂಭಿಸಿದರು. ಬೆಂಗಳೂರು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಮತ್ತು ದೆಹಲಿಯ ಕೆಲವು ನಗರಗಳಲ್ಲಿ ಇಲಾಖೆಯು ಒಟ್ಟು 55 ಕಡೆಗಳಲ್ಲಿ ದಾಳಿ ನಡೆಸಿದೆ.

ಕರ್ನಾಟಕ ಮತ್ತು ಕೆಲವು ಇತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯು (ಐಟಿ ಇಲಾಖೆ) 94 ಕೋಟಿ ರೂ. ನಗದು, 8 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ವಿದೇಶಿ ನಿರ್ಮಿತ 30 ಐಷಾರಾಮಿ ವಾಚ್‌ಗಳನ್ನು ವಶಪಡಿಸಿಕೊಂಡಿದೆ.

ಇದಲ್ಲದೆ, ಶೋಧದ ಸಮಯದಲ್ಲಿ, ವಾಚ್‌ಗಳನ್ನು ಮಾರಾಟ ಮಾಡುವ ವ್ಯವಹಾರದಲ್ಲಿ ತೊಡಗಿರದ ಖಾಸಗಿ ಉದ್ಯೋಗಿ ಬಳಿ ವಿದೇಶಿ ನಿರ್ಮಿತ ಸುಮಾರು 30 ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com