ವಿಜಯ ದಶಮಿ ಬಳಿಕ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ

ವಿಧಾನಸಭೆ ಚುನಾವಣೆ ಯ ನಾಲ್ಕು ತಿಂಗಳ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ

ಬೆಂಗಳೂರು: ವಿಧಾನಸಭೆ ಚುನಾವಣೆ ಯ ನಾಲ್ಕು ತಿಂಗಳ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ. ಪಕ್ಷದಲ್ಲಿ ಪುನಶ್ಚೇತನ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಸೂಚಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಅವರು, ಕೋರ್ ಕಮಿಟಿ ಹಾಗೂ 18 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ವಿಜಯ ದಶಮಿ ಬಳಿಕ ಪಕ್ಷ ಸಂಘಟನೆ ಹಾಗೂ ರಾಜ್ಯದ ಸಮಸ್ಯೆ ಹಿನ್ನಲೆಯಲ್ಲಿ ಪರಿಣಾಮವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಇನ್ನು ಕುಟುಂಬ ರಾಜಕಾರಣದ ಕುರಿತಾದ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ದೂ ಕುಟುಂಬ ಮೂಲ, ಅವರಿಗೆ ಯಾವ ನೈತಿಕತೆ‌ ಇದೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಎಂದು ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಇತರರು ಇದ್ದರು.

ಗುರುವಾರ ಜೆಪಿ ಭವನದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆಗೆ ದೇವೇಗೌಡರು ಚರ್ಚೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com