ಲೋಕಸಭಾ ಚುನಾವಣೆ: ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಎ. ಮಂಜು ವಿರೋಧ!

2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಅವರ ಬದಲಿಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸಬೇಕು ಎಂದು ಬಯಸಿದ್ದಾರೆ.
ಶಾಸಕ ಎ. ಮಂಜು, ಪ್ರಜ್ವಲ್ ರೇವಣ್ಣ ಸಾಂದರ್ಭಿಕ ಚಿತ್ರ
ಶಾಸಕ ಎ. ಮಂಜು, ಪ್ರಜ್ವಲ್ ರೇವಣ್ಣ ಸಾಂದರ್ಭಿಕ ಚಿತ್ರ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಅವರ ಬದಲಿಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸಬೇಕು ಎಂದು ಬಯಸಿದ್ದಾರೆ. ಅಭ್ಯರ್ಥಿ ಬಗ್ಗೆ ಅವರು ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ. 

ಜೆಡಿಎಸ್ ಸೇರುವ ಮುನ್ನ ಗೌಡರ ಕುಟುಂಬ ರಾಜಕಾರಣವನ್ನು ತೀವ್ರವಾಗಿ ವಿರೋಧಿಸಿದ್ದ ಮಂಜು, ಗೌಡರಿಗೆ 2024ರ  ಚುನಾವಣೆಯೇ ಕೊನೆಯ ಚುನಾವಣೆಯಾಗಿದ್ದು, ತವರು ಜಿಲ್ಲೆಗೆ ಅವರ ಕೊಡುಗೆಯನ್ನು ಪರಿಗಣಿಸಿ ಜನರು ಅವರನ್ನು ಸಂಸತ್ತಿಗೆ ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ. ಮಂಜು ಅವರ ಹೇಳಿಕೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ  ದೇವೇಗೌಡರ ಮೊಮ್ಮಗನಿಗೆ ಅವಮಾನ ಮಾಡುವಂತಿದೆ.

ಹಾಲಿ ಸಂಸದರು ಈಗಾಗಲೇ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಪಕ್ಷದ ಕಾರ್ಯಕರ್ತರ ಸಭೆ, ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಚಾರ ಆರಂಭಿಸಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಮಂಜು ಅವರು  ಸುಳ್ಳು ಪ್ರಮಾಣ ಪತ್ರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೈಕೋರ್ಟ್ ತೀರ್ಪಿಗೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್‌ನಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ.

ಸಿ ಎಂ ಇಬ್ರಾಹಿಂ ಅವರನ್ನು ಉಚ್ಛಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದನ್ನು ಎ ಮಂಜು ಸಮರ್ಥಿಸಿಕೊಂಡಿದ್ದಾರೆ. ಮುಂಬರುವ ಸಂಸದೀಯ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಎ ಮಂಜು ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಈಗಾಗಲೇ  ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

ರಾಜಕೀಯದಲ್ಲಿ ಯಾವುದೇ ಶತ್ರು ಅಥವಾ ಮಿತ್ರರಿಲ್ಲ ಮತ್ತು ರಾಜಕೀಯ ಪಕ್ಷಗಳು ಅಸ್ತಿತ್ವಕ್ಕಾಗಿ ಸಮಯೋಚಿತ ನಿರ್ಧಾರ ತೆಗೆದುಕೊಳ್ಳುತ್ತವೆ. ಈ ಕುರಿತು ಪ್ರತಿಕ್ರಿಯೆಗೆ ಪ್ರಜ್ವಲ್ ರೇವಣ್ಣ ಸಿಗಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com