ರಾಜಕೀಯದಲ್ಲಿ ಕುಮಾರಸ್ವಾಮಿ ವಿಲನ್; ಕನಕಪುರ ವಿಚಾರ ನನಗೆ ಗೊತ್ತಿಲ್ಲ, ಡಿಕೆಶಿಯನ್ನೆ ಕೇಳಿ: ಸಿದ್ದರಾಮಯ್ಯ

ಕನಕಪುರ ವಿಚಾರದಲ್ಲಿ ಮಾತನಾಡಿದ ಅವರು, ಆ ವಿಷಯವನ್ನು ಡಿ.ಕೆ ಶಿವಕುಮಾರ್ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ‌ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಎಂದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ರಾಜಕೀಯದಲ್ಲಿ ವಿಲನ್ ಇದ್ದರೆ ಅದು ಮಿಸ್ಟರ್ ಕುಮಾರಸ್ವಾಮಿ. ಸಮ್ಮಿಶ್ರ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು ಇದಕ್ಕೆ ಏನೂ ಕರೆಯಬೇಕು. ಇಡೀ ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲ ಕಳೆದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು. ಇದಕ್ಕೆ ಏನನ್ನಬೇಕು? ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್‌ ಹೋಟೆಲ್‌ನಲ್ಲೇ ಕಾಲ ಕಳೆದರು, ವಿಧಾನಸಭೆಯಲ್ಲಿ ಬಿಜೆಪಿ ಅವರೇ ಸರಕಾರ ಬೀಳಿಸಿದ್ದು ಅಂತಾ ಹೇಳಿದರು. ಇದು ರೆಕಾರ್ಡ್ ಆಗಿದೆ. ಅಸೆಂಬ್ಲಿ ರೆಕಾರ್ಡ್ ಬೇಕಾದರೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಬಿಜೆಪಿಯವರು ಹತಾಶರಾಗಿದ್ದಾರೆ. ಆ ಪಕ್ಷದವರಿಗಿಂತಲೂ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿ - ಜೆಡಿಎಸ್‌ನದ್ದು ಕುರುಡರ ಕಥೆಯಾಗಿದೆ. ಇವರು ಅವರ ಮೇಲೆ, ಅವರು ಇವರ ಮೇಲೆ ಅವಲಂಬಿತರಾಗಿದ್ದಾರೆ. ಖಾಲಿ ಡಬ್ಬ ಮಾತ್ರ ಶಬ್ದ ಜಾಸ್ತಿ ಮಾಡುತ್ತದೆ. ತುಂಬಿದ ಕೊಡ ಎಂದಿಗೂ ತುಳುಕುವುದಿಲ್ಲ ಎಂದು ಬಿಜೆಪಿ–ಜೆಡಿಎಸ್‌ ನಾಯಕರ ವಿರುದ್ಧ ಹರಿಹಾಯ್ದರು.

ಕನಕಪುರ ವಿಚಾರದಲ್ಲಿ ಮಾತನಾಡಿದ ಅವರು, ಆ ವಿಷಯವನ್ನು ಡಿ.ಕೆ ಶಿವಕುಮಾರ್ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ‌ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಎಂದರು.

ಇದು ಎಟಿಎಂ ಸರಕಾರ ಎಂಬ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ಬಿಜೆಪಿ ಗೆ ಮಾನ ಮರ್ಯಾದೆ ಇದ್ಯಾ? ಕೋಟ್ಯಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ? ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿ ಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದರು.

ಬಿಜೆಪಿಯವರು ಸಾಲ ಮಾಡಿ ಆರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರೂ ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ ಪೆಂಡಿಂಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿಯ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com