ರೇಣುಕಾಚಾರ್ಯ
ರೇಣುಕಾಚಾರ್ಯ

ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು, ಬಿಎಸ್‌ವೈಗೆ ಬಿಜೆಪಿ ನಾಯಕತ್ವ ನೀಡಬೇಕು: ರೇಣುಕಾಚಾರ್ಯ

ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.
Published on

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್​ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡಲಾಗುತ್ತಿದೆ. ಅವರ ಒಳ ಹೊಡೆತಗಳು ಹೇಳತೀರದು ಎಂದು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ‌ ನಡೆಸಿದರು,

“ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ, ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್​ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ ಎಂದು ಹೇಳಿದರು.

ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಭಾರತೀಯ ಜನತಾ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೋಗಬೇಕು. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಎಂದು ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com