ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಪ್ರತಿಯೊಬ್ಬರ ನಡೆ ನಮಗೆ ಗೊತ್ತಿದೆ, ಇದೇ ಲಾಸ್ಟ್ ವಾರ್ನಿಂಗ್; ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು : ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.

ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com