45 ಅಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಸಂತೋಷ್ ಗೆ ಖರ್ಗೆ ಪ್ರಶ್ನೆ

ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಹೇಳಿದ್ದಾರೆ.

40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಎಲ್ ಸಂತೋಷ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,  ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದರು. ಅಲ್ಲದೆ, ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.

ಆರ್​ಎಸ್​ಎಸ್​​ನವರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹೋಗಿ ಪಾಠ ಹೇಳುತ್ತಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ.

ಸಂತೋಷ್ ಪಡೆ ಕಟ್ಟಲು ಲಿಂಗಾಯತರಿಗೆ ಟಿಕೆಟ್ ನೀಡಿಲ್ಲ. ಅದು ವಿಫಲವಾಯಿತು ಎಂದು ನಿಮ್ಮ ಮಾಜಿ ಶಾಸಕರು ಹೇಳುತ್ತಿದ್ದಾರೆ. ಅದಕ್ಕೆ ಮೊದಲು ಸಂತೋಷ್ ಉತ್ತರ ನೀಡಲಿ, ನಂತರ ಶಾಸಕರ ಬಗ್ಗೆ ಮಾತನಾಡಲಿ ಎಂದರು.

ಶಾಸಕರ ಅಸಮಾಧಾನದ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಅಹವಾಲು ಸ್ವೀಕಾರ ಮಾಡಿದ್ದಾರೆ. ಹಂತ ಹಂತವಾಗಿ ಈಡೇರಿಸುತ್ತಾರೆ ಎಂಬ ವಿಶ್ವಾಸ ನೀಡಿದ್ದಾರೆ. ಎಲ್ಲರ ಸಹಕಾರ, ಸಹನೆ ಬೇಕಾಗುತ್ತದೆ. ಗ್ಯಾರಂಟಿಗಳು ಯೋಜನೆಗಲು ಎಲ್ಲರಿಗೂ ತಲುಪುತ್ತಿದೆ. ಈ ಬಾರಿ ಸ್ವಲ್ಪ ಕಷ್ಟ ಆಗಬಹುದು ಎಂದು ಸಿಎಂ ಹೇಳಿದ್ದಾರೆ. ಹಿಂದಿನ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವ ಅಭ್ಯಾಸ ಮಾಡಿಕೊಂಡಿದ್ದರು. ಈಗ ಆರ್ಥಿಕವಾಗಿ ರಾಜ್ಯ ದಿವಾಳಿಯಾಗಿಲ್ಲ. ಪ್ರಗತಿಪರ ಹೆಜ್ಜೆ ಹಾಕುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com