ಆಪರೇಷನ್ ಹಸ್ತ?: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ ಮನೆಗೆ ಡಿಕೆ ಶಿವಕುಮಾರ್​​ ಭೇಟಿ

ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ಆಪರೇಷನ್ ಹಸ್ತ ನಡೆಸಿ ಶತಾಯ-ಗತಾಯ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಉಮೇದಿನಲ್ಲಿರುವ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...
ಪೂರ್ಣಿಮಾ ಶ್ರೀನಿವಾಸ್​ ಮನೆಗೆ ಡಿಕೆ ಶಿವಕುಮಾರ್​​ ಭೇಟಿ
ಪೂರ್ಣಿಮಾ ಶ್ರೀನಿವಾಸ್​ ಮನೆಗೆ ಡಿಕೆ ಶಿವಕುಮಾರ್​​ ಭೇಟಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ಆಪರೇಷನ್ ಹಸ್ತ ನಡೆಸಿ ಶತಾಯ-ಗತಾಯ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಉಮೇದಿನಲ್ಲಿರುವ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ ಅವರ ಮನೆಗೆ ಭೇಟಿ ನೀಡಿದ್ದಾರೆಯ

ಇಂದು ಕೆ.ಆರ್. ಪುರಂನ ದೇವಸಂದ್ರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. 

ಪೂರ್ಣಿಮಾ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಡಿಸಿಎಂ ಶಿವಕುಮಾರ್​ ಭೇಟಿ ಮಹತ್ವ ಪಡೆದುಕೊಂಡಿದೆ. ಪೂರ್ಣಿಮಾ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಹಿನ್ನಲೆ, ಡಿಸಿಎಂ ಶಿವಕುಮಾರ್ ಭೇಟಿ ನೀಡಿದ್ದಾರೆ. ಪೂರ್ಣಿಮಾ ತಂದೆ ದಿವಂಗತ ಕೃಷ್ಣಪ್ಪ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಇನ್ನು ಡಿಕೆ ಶಿವಕುಮಾರ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಪೂರ್ಣಿಮಾ ಅವರು, ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ. ಕಾಂಗ್ರೆಸ್ ಸೇರುವುದಾದರೆ ಎಲ್ಲರಿಗೂ ಹೇಳಿಯೇ ಹೋಗುತ್ತೇನೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com