ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು ಮತ್ತು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸಲಾಗುವುದು ಎಂದು ಯಡಿಯೂರಪ್ಪ ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾಳೆ ನಮ್ಮ ಶಾಸಕರು, ಸಂಸದರು ಸೇರಿ 15ರಿಂದ 20 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದರಿಂದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ.

ಬರಗಾಲದಿಂದ ಜನ ತತ್ತರಿಸುತ್ತಿದ್ದಾರೆ. ವಿದ್ಯುತ್ ಕಡಿತ ಮಾಡಲಾಗುತ್ತಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಹೀಗಾಗಿ ಬೆಂಗಳೂರು, ತಾಲೂಕು ಕೇಂದ್ರ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ನಾಳೆಯಿಂದ ನಮ್ಮ ಹೋರಾಟದ ಆರಂಭವಷ್ಟೇ. ಈ ಹೋರಾಟ ರಾಜ್ಯಾದ್ಯಂತ ನಡೆಯಲಿದೆ. ಇದು ಭವಿಷ್ಯದಲ್ಲಿ ಯಾವ ರೂಪ ಪಡೆದುಕೊಳ್ಳುತ್ತದೆ ಎಂದು ನಮಗೇ ಗೊತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಹೊಣೆ' ಎಂದು ಬಿಜೆಪಿ ಪ್ರಬಲ ನಾಯಕ ಎಚ್ಚರಿಕೆ ನೀಡಿದ್ದಾರೆ.

ನಮಗೆ ಕುಡಿಯಲು ನೀರು ಇಲ್ಲದಿದ್ದರೂ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡಲಾಗುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com