ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ; ಎಚ್ ಡಿಕೆ- ಸಿಪಿವೈ ಒಂದಾಗುತ್ತಿರೋದು ಸಂತೋಷ: ಡಿಕೆಶಿ
ನಾನು ಕಷ್ಟಗಳನ್ನು ಸಹಿಸಿಕೊಳ್ಳಬಲ್ಲೆ ಮತ್ತು ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ಮಹಾರಾಷ್ಟ್ರದಲ್ಲಿ ಏನಾಯ್ತು? ಸಿಎಂ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕರು ವಾಷಿಂಗ್ ಮೆಷಿನ್‌ನಲ್ಲಿ ಕೊಚ್ಚಿಹೋದರು ಎಂದು ವ್ಯಂಗ್ಯವಾಡಿದರು
Published: 08th September 2023 03:02 PM | Last Updated: 08th September 2023 06:47 PM | A+A A-

ಎಚ್.ಡಿ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್ ಮತ್ತು ಡಿಕೆಶಿ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನ ಕೆಲವು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಶುಭ ಮೂಹೂರ್ತಕ್ಕಾಗಿ ಕಾಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್, ದಕ್ಷಿಣ ಕನ್ನಡದ ಬೈಂದೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರುವ ಘೋಷಣೆಯನ್ನು ಸ್ವಾಗತಿಸಿದ್ದಾರೆ.
ಶಿವಕುಮಾರ್ ಅವರೊಂದಿಗೆ ಸುಕುಮಾರ್ ಶೆಟ್ಟಿ ಗುರುವಾರ ಸಭೆ ನಡೆಸಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಬಿಜೆಪಿ ನಾಯಕರನ್ನು ಬೆಳೆಯಲು ಬಿಡುವುದಿಲ್ಲ ಮತ್ತು ಪಕ್ಷದಲ್ಲಿ ಕಾಲು ಎಳೆಯುವ ಪ್ರವೃತ್ತಿ ಇದೆ, ಬಿಜೆಪಿಗೆ ಭವಿಷ್ಯವಿಲ್ಲ ಮತ್ತು ಕಾಂಗ್ರೆಸ್ ಸೇರಲು ನಿರ್ಧರಿಸಿದೆ ಎಂದು ಶೆಟ್ಟಿ ಹೇಳಿದ್ದಾರೆ.
ಶಿವಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತಾ, “ನಾನು ‘ಆಪರೇಷನ್ ಹಸ್ತ’ ನಡೆಸುವುದಿಲ್ಲ. ‘ಆಪರೇಷನ್ ಹಸ್ತ’ ಹಾಗೂ ‘ಆಪರೇಷನ್ ಕಮಲ’ವನ್ನು ನಾನು ವಿರೋಧಿಸುತ್ತೇನೆ. ನಾನು ಕೇವಲ ಸಹಕಾರಕ್ಕಾಗಿ ಇಲ್ಲಿದ್ದೇನೆ. ಸ್ನೇಹದ ಹಸ್ತ ಚಾಚುತ್ತಿದ್ದೇನೆ. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವ, ಅದರ ಸಿದ್ಧಾಂತ ಮತ್ತು ಭಾರತ್ ಜೋಡೋ ಯಾತ್ರೆಯಂತಹ ಕಾರ್ಯಕ್ರಮಗಳನ್ನು ಯಾರು ನಂಬುತ್ತಾರೋ ಅವರನ್ನು ಸ್ವಾಗತಿಸಲಾಗುವುದು ಎಂದರು.
ಇದನ್ನೂ ಓದಿ: 'ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ': ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ 'ಕೈ' ಸೇರ್ಪಡೆ ಖಚಿತ
ಎಷ್ಟು ನಾಯಕರು ಸಿದ್ಧರಾಗಿದ್ದಾರೆ ಎಂಬ ಪ್ರಶ್ನೆಗೆ, ಅಂಕಿಅಂಶಗಳನ್ನು ನೀಡಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು. ಆದರೆ ವಿರೋಧ ಪಕ್ಷದ ನಾಯಕರೇ ಬಹಿರಂಗವಾಗಿ ಬರುತ್ತಿದ್ದಾರೆ ಎಂದು ಹೇಳಿದರು. ಅವರು ಯಾವಾಗ ಕಾಂಗ್ರೆಸ್ ಸೇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಮಗೆ ಒಳ್ಳೆಯ ಶುಭ ಮುಹೂರ್ತ ಬೇಕು, ಅದಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.
ಒಳ್ಳೆಯ ಸಂಗತಿಗಳು ನಡೆಯಬೇಕೆಂದು ನಾವು ಬಯಸುತ್ತೇವೆ. ರಾಜಕೀಯದಲ್ಲಿ ಯಾರೂ ಶಾಶ್ವತರಲ್ಲ. ಶಾಶ್ವತ ಸ್ನೇಹಿತರಿಲ್ಲ, ಶಾಶ್ವತ ಶತ್ರುಗಳಿಲ್ಲ. ನಮ್ಮ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ನೋಡುತ್ತಿದ್ದೀರಾ? ಬದ್ಧ ವೈರಿಗಳಾದ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದಾಗುತ್ತಾರೆ ಎಂಬ ವರದಿ ಉಲ್ಲೇಖಿಸಿ ಶಿವಕುಮಾರ್ ಹೇಳಿದರು.
ಶಿವಕುಮಾರ್ ವಿರೋಧ ಪಕ್ಷಗಳ ಮುಖಂಡರನ್ನು ಖುದ್ದು ಆಹ್ವಾನಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ಯಾರನ್ನೂ ಆಹ್ವಾನಿಸುವುದಿಲ್ಲ ಎಂದು ಹೇಳಿದರು. ಅವರು ರಾಜಕೀಯದಲ್ಲಿ ತಮ್ಮ ಭವಿಷ್ಯವನ್ನು ನೋಡುತ್ತಾರೆ. ಯಾರೂ ಮೂರ್ಖರಲ್ಲ. ಅವರು ತಮ್ಮ ವೃತ್ತಿ ಮತ್ತು ಜೀವನ ಸಹ ನೋಡಿಕೊಳ್ಳಬೇಕಾಗುತ್ತದೆ. ಹೀಗಾಗಿ ಬೆಂಗಳೂರಿನ ಸುತ್ತಮುತ್ತಲಿನ ಜನರು ಇಲ್ಲಿಗೆ ಬಂದು ನೆಲೆಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ 20 ಶಾಸಕರು; ಅವರ ಜೊತೆಯಲ್ಲಿಯೇ ಲೋಕಸಭೆ ಚುನಾವಣೆ: ರಾಜು ಕಾಗೆ
ನಾನು ಕಷ್ಟಗಳನ್ನು ಸಹಿಸಿಕೊಳ್ಳಬಲ್ಲೆ ಮತ್ತು ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ಮಹಾರಾಷ್ಟ್ರದಲ್ಲಿ ಏನಾಯ್ತು? ಸಿಎಂ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕರು ವಾಷಿಂಗ್ ಮೆಷಿನ್‌ನಲ್ಲಿ ಕೊಚ್ಚಿಹೋದರು ಎಂದು ವ್ಯಂಗ್ಯವಾಡಿದರು.
ಕರ್ನಾಟಕದ ಅಜಿತ್ ಪವಾರ್ ಸಾಧ್ಯತೆಯ ಬಗ್ಗೆ ಬಿಜೆಪಿ ಮಾತನಾಡುತ್ತಿರುವುದನ್ನು ಪ್ರಶ್ನಿಸಿದಾಗ, ಶಿವಕುಮಾರ್ ಅದರ ಬಗ್ಗೆ ನಂತರ ಮಾತನಾಡುತ್ತೇನೆ ಎಂದು ಸಮರ್ಥಿಸಿಕೊಂಡರು. ಬಿಜೆಪಿಯವರು ಶಿವಕುಮಾರ್ ಅವರನ್ನು ಕರ್ನಾಟಕದ ಅಜಿತ್ ಪವಾರ್ ಎಂದು ಕರೆಯುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.