ಯಾರಿಗೂ ಯಾರು ಅನಿವಾರ್ಯವಲ್ಲ; ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಇನ್ನೂ ಸಮಯವಿದೆ: ಕುಮಾರಸ್ವಾಮಿ ವ್ಯತಿರಿಕ್ತ ಹೇಳಿಕೆ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ವರದಿಗಳ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮೈತ್ರಿಗೆ ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದಾವೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ವರದಿಗಳ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮೈತ್ರಿಗೆ ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಈ ಹಂತದಲ್ಲಿ ಏನನ್ನೂ ಹೇಳುವುದಿಲ್ಲ ಎಂದು  ವಯಹೇಳಿದರು.

ಆದರೆ ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡರೆ ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿದ್ದರು.

ಮೈತ್ರಿಕೂಟದಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ಜೆಡಿ (ಎಸ್) ಉನ್ನತ ನಾಯಕ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ಯಡಿಯೂರಪ್ಪ ನಿನ್ನೆ ತಿಳಿಸಿದ್ದರು.

ಮೈತ್ರಿಗೆ ಎರಡೂ ಪಕ್ಷಗಳ ನಾಯಕರು ಒಪ್ಪಿದ್ದಾರೆ. ಜೆಡಿಎಸ್‌ಗೆ ನಾಲ್ಕು ಲೋಕಸಭಾ ಸ್ಥಾನಗಳನ್ನು ನೀಡಲು ಅಮಿತ್ ಶಾ ಸಮ್ಮತಿಸಿದ್ದಾರೆ. ಹೀಗಾಗಿ, ಬಿಜೆಪಿ ನಾಲ್ಕು ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಎಸ್‌ಗೆ ಅವಕಾಶ ನೀಡುತ್ತದೆ ಮತ್ತು ಉಳಿದ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತದೆ ಎಂದಿದ್ದರು.  ನಾನು ಮೈತ್ರಿಯನ್ನು ಸ್ವಾಗತಿಸುತ್ತೇನೆ. ಇದು ನಮಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ. ಮೈತ್ರಿಕೂಟವು 25 ರಿಂದ 26 ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ಕುಮಾರಸ್ವಾಮಿಯವರ ಉತ್ತಮ ರಾಜಕೀಯ ಭವಿಷ್ಯಕ್ಕಾಗಿ ಪೂಜೆ- ಹೋಮ- ಹವನ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂ ಸಂಪ್ರದಾಯದಂತೆ ಪೂಜೆ ನಡೆಯುತ್ತಿದ್ದು, ನಾನು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದೇನೆ. ನನ್ನ ತಂದೆಗೆ (ಎಚ್‌.ಡಿ. ದೇವೇಗೌಡರಿಗೆ) ಆರೋಗ್ಯ ಕೋರಿ ಪೂಜೆ ಸಲ್ಲಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.  ದೇವೇಗೌಡರ ಕುಟುಂಬ ಜ್ಯೋತಿಷ್ಯದ ನಂಬಿಕೆಗೆ ಹೆಸರುವಾಸಿ.

ಮೈತ್ರಿ ಘೋಷಣೆಗೂ ಮುನ್ನ ದೇವೇಗೌಡರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಭಾನುವಾರ ಜೆಡಿಎಸ್‌ನ ಬೃಹತ್ ಸಮಾವೇಶ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com