ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ: ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!
ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 - 80 ಕೋಟಿ, MLA ಟಿಕೆಟ್ ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.
Published: 14th September 2023 04:00 PM | Last Updated: 14th September 2023 04:00 PM | A+A A-

ಯತ್ನಾಳ್ ಜೊತೆ ಚೈತ್ರಾ ಕುಂದಾಪುರ
ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಕೊಡಿಸುವ ಭರವಸೆ ನೀಡಿ ಕೊಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಡಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಬಂಧನದ ಬೆನ್ನಲ್ಲೇ, ಕಾಂಗ್ರೆಸ್ ಟ್ವೀಟ್ ಮಾಡಿ, ‘ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?’ ಎಂದು ಪ್ರಶ್ನಿಸಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 - 80 ಕೋಟಿ, MLA ಟಿಕೆಟ್ ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ! ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ
ಬಿಜೆಪಿಯಲ್ಲಿ ಸಿಎಂ ಹುದ್ದೆಗೆ 2,500 ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ @BasanagoudaBJP ಅವರು ಬಿಜೆಪಿ ಟಿಕೆಟ್ ಗೆ 7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ. ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ, PSI ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು, ರೌಡಿ ಶೀಟರ್ ಗಳೂ ಬಿಜೆಪಿಗರಿಗೆ ಆಪ್ತರು, ಟಿಕೆಟ್ ಹಗರಣದ ವಂಚಕರೂ ಬಿಜೆಪಿಗರಿಗೆ ಆಪ್ತರು. ಕಳ್ಳರು, ಸುಳ್ಳರು, ವಂಚಕರು @BJP4Karnataka ನಾಯಕರಿಗೇ ಆಪ್ತವಾಗುವುದೇಕೆ?
ಬಿಜೆಪಿಯಲ್ಲಿ ಸಿಎಂ ಹುದ್ದೆಗೆ 2,500 ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ @BasanagoudaBJP ಅವರು ಬಿಜೆಪಿ ಟಿಕೆಟ್ ಗೆ 7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ.
— Karnataka Congress (@INCKarnataka) September 13, 2023
ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ,
PSI ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು,
ರೌಡಿ ಶೀಟರ್ ಗಳೂ ಬಿಜೆಪಿಗರಿಗೆ ಆಪ್ತರು,
ಟಿಕೆಟ್ ಹಗರಣದ… pic.twitter.com/e4onp4yrOE
ಬಿಜೆಪಿ ಪಕ್ಷದಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಟಿಕೆಟ್ ವಂಚನೆಯ ಪ್ರಕರಣದಲ್ಲಿ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯೂ ಪ್ರಮುಖ ಆರೋಪಿ. ಈತನ ವಂಚನೆಯ ಬಗ್ಗೆ ಒಂದು ತಿಂಗಳ ಹಿಂದೆಯೇ ಪಕ್ಷಕ್ಕೆ ದೂರು ಬಂದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಏಕೆ @BJP4Karnataka ?ವಂಚಕರಿಗೆ, ಭ್ರಷ್ಟರಿಗೆ ಬಿಜೆಪಿ ತವರು ಮನೆಯಾಗಿದೆಯೇ?
ಬಿಜೆಪಿ ತನ್ನ ಆಡಳಿತದಲ್ಲಿ ಕುಮಾರಕೃಪಾ ಅತಿಥಿಗೃಹವನ್ನು ಭ್ರಷ್ಟರು, ಲಂಪಟರು, ದಗಾಕೋರರ ಅಡ್ಡೆಯಾಗಿ ಬದಲಾಯಿಸಿತ್ತೇ? ಸ್ಯಾಂಟ್ರೋ ರವಿಯೂ ವಂಚನೆಯ ಕೆಲಸಗಳಿಗೆ ಕುಮಾರಕೃಪಾವನ್ನೇ ಕಾಯಂ ಕಾರ್ಯಸ್ಥಾನ ಮಾಡಿಕೊಂಡಿದ್ದ, ಚೈನ್ ಚೈತ್ರ ಕೂಡ ಟಿಕೆಟ್ ವಂಚನೆಗೆ ಕುಮಾರಕೃಪಾವನ್ನೇ ಆಶ್ರಯಿಸಿದ್ದಳು. ಕುಮಾರಕೃಪಾ ಅತಿಥಿಗೃಹವನ್ನು ಥರ್ಡ್ ಗ್ರೇಡ್ ಲಾಡ್ಜ್ ನಂತೆ ವ್ಯವಸ್ಥೆ ಮಾಡಿಕೊಡುವುದರ ಹಿಂದೆ ಯಾರ ಕೃಪೆ ಇತ್ತು @BJP4Karnataka? ಎಂದು ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಸಿದೆ.