45 ಶಾಸಕರು ನಮ್ಮ ಸಂಪರ್ಕದಲಿದ್ದಾರೆ, ಜನವರಿ ನಂತರ ಸರ್ಕಾರ ಪತನ: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ನಮ್ಮ ಸಂಪರ್ಕದಲ್ಲಿ 45 ಜನ ಶಾಸಕರಿದ್ದು, ಮುಂದಿನ ಜನವರಿ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
Published: 17th September 2023 06:39 PM | Last Updated: 17th September 2023 06:39 PM | A+A A-

ಬಸನಗೌಡ ಪಾಟೀಲ್ ಯತ್ನಾಳ್
ಹುಬ್ಬಳ್ಳಿ: ನಮ್ಮ ಸಂಪರ್ಕದಲ್ಲಿ 45 ಜನ ಶಾಸಕರಿದ್ದು, ಮುಂದಿನ ಜನವರಿ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಾತ್ನಾಳ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದರು.
ಇದನ್ನು ಓದಿ: ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ: ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!
ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಕೇವಲ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಯತ್ನಾಳ್ ಹೇಳಿದ್ದಾರೆ.
ಹರಿಪ್ರಸಾದ್ ಅವರಿಗೆ ನೋವಿರುವುದರಿಂದ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ? ಸಿದ್ಧರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ನಡೆಸಿದ್ದಾರೆ. ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಹರಿಪ್ರಸಾದ್ ಅಸಮಾಧಾನ ಹೊರಹಾಕ್ತಿದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.