ರಾಜ್ಯದಲ್ಲಿರುವುದು ಸ್ಟಾಲಿನ್ ಅವರ ಗುಲಾಮ ಸರ್ಕಾರ: ಬಿಜೆಪಿ ವಾಗ್ದಾಳಿ
ಕನ್ನಡಿಗರ ಪೌರುಷ, ಕನ್ನಡಿಗರ ಸಾಹಸ, ಕನ್ನಡಿಗರ ಸ್ವಾಭಿಮಾನ, ಕನ್ನಡದ ಆಸ್ಮಿತೆಯನ್ನು ಕಾಂಗ್ರೆಸ್ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ.
Published: 22nd September 2023 02:54 PM | Last Updated: 22nd September 2023 03:50 PM | A+A A-

ಸ್ಟಾಲಿನ್
ಬೆಂಗಳೂರು: ಕನ್ನಡಿಗರ ಪೌರುಷ, ಕನ್ನಡಿಗರ ಸಾಹಸ, ಕನ್ನಡಿಗರ ಸ್ವಾಭಿಮಾನ, ಕನ್ನಡದ ಆಸ್ಮಿತೆಯನ್ನು ಕಾಂಗ್ರೆಸ್ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ. ಕರ್ನಾಟಕದಲ್ಲಿರುವುದು ಸ್ಟಾಲಿನ್ ಅವರ ಗುಲಾಮ ಸರ್ಕಾರ. ಕನ್ನಡ, ಕರ್ನಾಟಕ, ನಾಡ ವಿರೋಧಿ ಕಾಂಗ್ರೆಸ್ಸಿಗೆ ಕನ್ನಡಿಗರು ಧಿಕ್ಕಾರ ಹಾಕುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು ಕಾಂಗ್ರೆಸ್ ಸರ್ಕಾರ ಹರಾಜು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ. ಆಗ ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ ತಪ್ಪಿಸಲಾಯಿತು.
ಹಿಂದಿ ಹೇರಿಕೆಯೆಂದು ಹುಸಿ ಪುಕಾರು ಹಬ್ಬಿಸಿ ಪ್ರಚಾರ ಗಿಟ್ಟಿಸಿಕೊಳ್ಳಲಾಯಿತು. ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿದ್ದರೂ ಪಾದಯಾತ್ರೆಯ ನಾಟಕ ಮಾಡಲಾಯಿತು. ಈಗ, ಬರಗಾಲ ಬಂದಿದ್ದರೂ ಜಲಾಶಯಗಳು ಒಣಗುತ್ತಿದ್ದರೂ ಸಿದ್ದರಾಮಯ್ಯ ಅವರ ಸರ್ಕಾರ ಕದ್ದು ಮುಚ್ಚಿ ಕಾವೇರಿ ನೀರನ್ನು ಬಿಟ್ಟಿತು ಎಂದು ಬಿಜೆಪಿ ದೂರಿದೆ.
ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು @INCKarnataka ಸರ್ಕಾರ ಹರಾಜು ಹಾಕಿದೆ. ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ.
— BJP Karnataka (@BJP4Karnataka) September 22, 2023
ಆಗ,
✔ ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ…
ʼʼI.N.D.I A ಮೈತ್ರಿಕೂಟ ಉಳಿಸಿಕೊಳ್ಳಲು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಪರ ಸಮರ್ಥವಾಗಿ ವಾದ ಮಂಡಿಸದೆ ಸೋಲು ಒಪ್ಪಿಕೊಂಡಿತು. ಒಮ್ಮೆಯೂ ಸಿದ್ದರಾಮಯ್ಯ ಅವರ ಸರ್ಕಾರ ತಮಿಳುನಾಡಿನೊಂದಿಗೆ ಕೂತು ನೀರಿನ ಅಭಾವ ಕುರಿತು ಅರ್ಥ ಮಾಡಿಸಲಿಲ್ಲಎಂದು ಬಿಜೆಪಿ ಟ್ವೀಟ್ ಮಾಡಿದೆ.