ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಕಾಂಗ್ರೆಸ್ ಟಾಂಗ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಕುರಿತ ಮಾತುಕತೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಎಂದು ಟಾಂಗ್ ನೀಡಿದೆ.
Published: 22nd September 2023 11:46 PM | Last Updated: 22nd September 2023 11:47 PM | A+A A-

ಅಮಿತ್ ಶಾ ಜೊತೆಗೆ ಕುಮಾರಸ್ವಾಮಿ ಮತ್ತಿತರರು
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಕುರಿತ ಮಾತುಕತೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಎಂದು ಟಾಂಗ್ ನೀಡಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್; ಸೀಟು ಹಂಚಿಕೆಯಲ್ಲಿ ಗೊಂದಲ ಇಲ್ಲ - ಎಚ್ ಡಿಕೆ
ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಟೀಕಾ ಪ್ರಹಾರ ನಡೆಸಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ?
— Karnataka Congress (@INCKarnataka) September 22, 2023
ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ?
ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್… pic.twitter.com/nDdLx8a6JT