ದೇಶದಲ್ಲಿ ಕಾಂಗ್ರೆಸ್ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಸಾಬೀತುಪಡಿಸಿದೆ: ಜಮೀರ್ ಅಹ್ಮದ್ ಖಾನ್

ಜೆಡಿಎಸ್ ಶುಕ್ರವಾರ ಬಿಜೆಪಿ ನೇತೃತ್ವದ ಎನ್‌ಡಿಗೆ ಸೇರಿಕೊಂಡಿದ್ದು, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್, ಬಿಜೆಪಿ-ಜೆಡಿಎಸ್ ಮೈತ್ರಿಯು ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಜೆಡಿಎಸ್ ಶುಕ್ರವಾರ ಬಿಜೆಪಿ ನೇತೃತ್ವದ ಎನ್‌ಡಿಗೆ ಸೇರಿಕೊಂಡಿದ್ದು, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್, ಬಿಜೆಪಿ-ಜೆಡಿಎಸ್ ಮೈತ್ರಿಯು ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಸಾಬೀತುಪಡಿಸಿದೆ. ಯಾವುದೇ ಸಿದ್ಧಾಂತವಿಲ್ಲದ ಮೈತ್ರಿ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟತೆ ಇದೆ. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಯು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಯೋಜನಕಾರಿಯಾಗಲಿದೆ' ಎಂದರು.

‘ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಸಾಬೀತು ಮಾಡಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ 'ಅತ್ಯಂತ ಕೋಮುವಾದಿ ಪಕ್ಷ' ಎನಿಸಿಕೊಂಡಿರುವ ಬಿಜೆಪಿಯೊಂದಿಗೆ ಪಕ್ಷವು ಈಗ ಕೈಜೋಡಿಸಿರುವುದರಿಂದ ಜೆಡಿಎಸ್‌ನಿಂದ 'ಜಾತ್ಯತೀತ' ಪದವನ್ನು ತೆಗೆದುಹಾಕಬೇಕು' ಎಂದು ಅವರು ಹೇಳಿದರು.

'ಜನತಾ ದಳದಿಂದ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ. 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ, ಕನಿಷ್ಠ 10 ಸ್ಥಾನಗಳನ್ನಾದರೂ ಗೆಲ್ಲುತ್ತಿತ್ತು. ಮೈತ್ರಿಯಿಂದಾಗಿ ಕಾಂಗ್ರೆಸ್ ಒಂದು ಸ್ಥಾನವನ್ನಷ್ಟೇ ಗೆದ್ದುಕೊಂಡಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಥಿತಿಯಪ ಇದೇ ಆಗಲಿದೆ' ಎಂದರು.

ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೇರುವ ಘೋಷಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com