ಕಾವೇರಿ ವಿವಾದ: ಜನರ ಹಿತದೃಷ್ಟಿಯಿಂದ ನಡೆದುಕೊಳ್ಳಿ, ನ್ಯಾಯಾಲಯದ ಆದೇಶ ಪಾಲಿಸದಿರಿ; ಸರ್ಕಾರಕ್ಕೆ ಹೆಚ್'ಡಿಕೆ ಆಗ್ರಹ

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯ ಜನತೆ ಕರೆ ನೀಡಿರುವ ಬಂದ್‌ಗೆ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಬೆಂಬಲ ನೀಡಿದ್ದಾರೆ.
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯ ಜನತೆ ಕರೆ ನೀಡಿರುವ ಬಂದ್‌ಗೆ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಬೆಂಬಲ ನೀಡಿದ್ದಾರೆ.

ಕಾವೇರಿ ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದು, ನೇರವಾಗಿ ಮಂಡ್ಯಗೆ ತೆರಳಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆಂದು ಹೇಳಿದರು.

ಕಾವೇರಿ ವಿವಾದ ಸಂಬಂಧ (ಕೇಂದ್ರ ಗೃಹ ಸಚಿವ) ಅಮಿತ್ ಶಾ ಅವರಿಗೆ ರಾಜ್ಯದ ವಾಸ್ತವಿಕ ಸ್ಥಿತಿಯನ್ನು ವಿವರಿಸಿದ್ದೇನೆ. ರಾಜ್ಯ ಸರ್ಕಾರ ತಡವಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬಾರದು. ನ್ಯಾಯಾಲಯ ಕಟ್ಟುನಿಟ್ಟಾದ ಆದೇಶವನ್ನು ಜಾರಿಗೊಳಿಸಿದರೆ ಅದನ್ನು ಅನುಸರಿಸಲು ಸಾಧ್ಯವಿಲ್ಲ, ಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ನಿರ್ಧಾರ ಕೈಗೊಳ್ಳಬೇಕು. ಜನರ ಹಿತದೃಷ್ಟಿಯಿದ ನ್ಯಾಯಾಲಯದ ಆದೇಶ ಪಾಲನೆ ಮಾಡದಿದ್ದರೆ ಅದು ಉಲ್ಲಂಘನೆಯಾಗುವುದಿಲ್ಲ ಎಂದು ತಿಳಿಸಿದರು.

ಈ ನಡುವೆ ಕಾನೂನು ತಜ್ಞರು ನ್ಯಾಯಾಲಯದ ಆದೇಶ ಪಾಲನೆ ಮಾಡದಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ ಕುಮಾರಸ್ವಾಮಿ ಅವರೂ ತಮಿಳುನಾಡಿಗೆ ನೀರು ಬಿಟ್ಟಿದ್ದರು. ನಮ್ಮಲ್ಲಿ ಮೂವರು ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಹಲವಾರು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಆರು ಕಾನೂನು ತಜ್ಞರು ಅಡ್ವೊಕೇಟ್ ಜನರಲ್ ಆಗಿ ಕೆಲಸ ಮಾಡಿದ್ದಾರೆ. ಅವರನ್ನು ಆಹ್ವಾನಿಸಿ ಸಭೆ ನಡೆಸುವ ಸಾಮಾನ್ಯ ಜ್ಞಾನ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com