ಇನ್ಮುಂದೆ ಜೆಡಿಎಸ್ 'ಸೆಕ್ಯೂಲರ್' ಪದ ಕೈಬಿಟ್ಟು, KD ಎಂದು ಬದಲಿಸಿಕೊಳ್ಳಬಹುದು: ಕಾಂಗ್ರೆಸ್ ಲೇವಡಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವ ಜಾತ್ಯತೀತ ಜನತಾದಳ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.
Published: 23rd September 2023 01:06 AM | Last Updated: 23rd September 2023 03:13 PM | A+A A-

ಜೆಡಿಎಸ್ ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವ ಜಾತ್ಯತೀತ ಜನತಾದಳ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಇನ್ಮುಂದೆ ಜೆಡಿಎಸ್ ಪಕ್ಷ ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ ಜೆಡಿ ಎಂದು ಇಟ್ಟುಕೊಳ್ಳಬಹುದು ಇಲ್ಲವೇ ಕೆಡಿ ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! KD ಅಂದರೆ “ಕಮಲ ದಳ”! ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ ಎಂದು ಟೀಕಿಸಿದೆ.
ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ,
ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು.
ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!
KD ಅಂದರೆ “ಕಮಲ ದಳ”!
ಪಕ್ಷ ವಿಸರ್ಜಿಸುತ್ತೇನೆ ಎಂದವರು…— Karnataka Congress (@INCKarnataka) September 22, 2023
ಇದನ್ನೂ ಓದಿ: ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಕಾಂಗ್ರೆಸ್ ಟಾಂಗ್
ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ.ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ. ಜೆಡಿಎಸ್ ಅಧಿಕೃತವಾಗಿ ಎನ್ ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ ಎಂದು ಲೇವಡಿ ಮಾಡಿದೆ.