ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ, ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇದೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಕೊಟ್ಟರು.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಕೊಟ್ಟರು.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಹೆಚ್​ ಡಿ ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದರು. ಸದ್ಯದಲ್ಲಿಯೇ ಹೋಗುತ್ತೇನೆ. ಹೇಗೊ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ. ಬೆಂಗಳೂರು ಬಂದ್​ಗೆ ಬಿಜೆಪಿ ಬೆಂಬಲವೂ ಇದೆ. ಇದಕ್ಕೆ ನಮ್ಮದೇನೂ ವಿರೋಧ ಇರಲ್ಲ. ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದರು.

ತಮ್ಮ ಭೇಟಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪನವರ ಆಶೀರ್ವಾದ ಪಡೆಯಲು ಬಂದಿರುವುದಾಗಿ ಹೇಳಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಎನ್ ಡಿಎ ಮೈತ್ರಿಕೂಟದ ಭಾಗವಾಗಿದೆ.ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಆಶೀರ್ವಾದ ಪಡೆಯಲು ನಾನು ಇಲ್ಲಿಗೆ ಬಂದಿದ್ದೇನೆ. ಅವರು ಎಲ್ಲರೊಂದಿಗೆ ಉತ್ತಮ ಒಡನಾಟ, ಬಾಂಧವ್ಯ ಹೊಂದಿದ್ದಾರೆ ಎಂದರು. 

ಬಿಜೆಪಿ-ಜೆಡಿಎಸ್​ ಮೈತ್ರಿ, ಇಂದು ಜನತಾದಳದ ಮುಸ್ಲಿಂ ಮುಖಂಡರ ಸಭೆ: ಜೆಡಿಎಸ್​ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಸ್ಲಿಂ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಸ್ಪೋಟವಾಗಿದೆ. ಮುಸ್ಲಿಂ ಮುಖಂಡರು ಸಾಮೂಹಿಕವಾಗಿ ಜೆಡಿಎಸ್ ತೊರೆಯಲು  ನಿರ್ಧರಿಸಿದ್ದಾರೆ. ಅಸಮಾಧಾನ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಂ ಮುಖಂಡರು ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ 20 ಕ್ಕೂ‌ಹೆಚ್ಚು ಮುಖಂಡರು ಭಾಗಿಯಾಗಲಿದ್ದಾರೆ. ಸಭೆ ಮಾಡಿ ಜೆಡಿಎಸ್ ತೊರೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 

Related Stories

No stories found.

Advertisement

X
Kannada Prabha
www.kannadaprabha.com