ಜೆಡಿಎಸ್-ಬಿಜೆಪಿ ಮೈತ್ರಿ: ಸ್ಥಳೀಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪ್ರತಿಷ್ಠೆ ಎಂಬುದು ಸಮಸ್ಯೆಯಾವುದಿಲ್ಲ- ಎಚ್‌ಡಿ.ಕುಮಾರಸ್ವಾಮಿ

2024ರ ಲೋಕಸಭೆ ಚುನಾವಣೆಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮೊದಲು ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮೊದಲು ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.

ನವದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರ ಪ್ರತಿಷ್ಠೆಯ ವಿಚಾರವಾಗಬಾರದು. ಸ್ಥಳೀಯ ನಾಯಕರಲ್ಲಿ ವಿಶ್ವಾಸ ಮೂಡಿಸಲು ಸಭೆ ನಡೆಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ದಸರಾ ವೇಳೆಗೆ ವಿಚಾರಗಳು ಸ್ಪಷ್ಟವಾಗಬೇಕು. ರಾಷ್ಟ್ರ ಮತ್ತು ರಾಜ್ಯ ನಾಯಕರು ಮೈತ್ರಿ ಕುರಿತು ಘೋಷಣೆ ಮಾಡಿ ರಾಜ್ಯದ ಜನತೆಗೆ ಅದರ ಸಾರವನ್ನು ವಿವರಿಸಲಿದ್ದಾರೆಂದು ಹೇಳಿದರು.

ಇದೇ ವೇಳೆ 2019 ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರ ಕುರಿತು ಮಾತನಾಡಿ, ನಮ್ಮ ಗಮನ ಇದೀಗ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಕುರಿತು ಇದೆಯೇ ಹೊರತು ಕೇವಲ ಮಂಡ್ಯದ ಮೇಲೆ ಇಲ್ಲ. ಮುಂದಿನ ದಿನಗಳಲ್ಲಿ ನಾವು ಮೈತ್ರಿಕೂಟದ ಅಭ್ಯರ್ಥಿಯ ಬಗ್ಗೆ ಚರ್ಚಿಸುತ್ತೇವೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com