ಮೋದಿ ಕೇವಲ ಕರ್ನಾಟಕ, ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ
ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ಧಾರೆ.
Published: 26th September 2023 08:43 PM | Last Updated: 26th September 2023 08:43 PM | A+A A-

ಶೋಭಾ ಕರಂದ್ಲಾಜೆ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ಧಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ಸಮಸ್ಯೆ ಉದ್ಭವಿಸಿದೆ. ಈ ವಿಚಾರದಲ್ಲಿ ಮೋದಿ ಮಧ್ಯೆ ಪ್ರವೇಶಿಸೋಕೆ ಅವರು ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರದಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
"ರಾಜ್ಯ ಕಾಂಗ್ರೆಸ್ ನಾಯಕರು ಪರಸ್ಪರ ಕಿತ್ತಾಟದಲ್ಲಿ ತೊಡಗಿದ್ದಾರೆ. ತಮಿಳುನಾಡನ್ನು ಓಲೈಸಲು ಕಾಂಗ್ರೆಸ್ ನಾಯಕರು ಮುಂದಾಗಿರಬೇಕು. ಕಾವೇರಿ ಕೊಳ್ಳದ ಅಧ್ಯಯನ ಸರಿಯಾಗಿ ಮಾಡದೇ ಇರಬಹುದು. ಈ ಕಾರಣದಿಂದಲೇ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ಸುಪ್ರೀಂ ಕೋರ್ಟ್‌ಗೆ ಸರಿಯಾದ ಅಂಕಿ ಅಂಶಗಳನ್ನು ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ರಾಜ್ಯದ ಕನ್ನಡಪರ ಸಂಘಟನೆಗಳು ಮತ್ತು ರೈತರ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸುಪ್ರೀಂ ಕೋರ್ಟ್ ಗೆ ಹಾಗೂ ಪ್ರಾಧಿಕಾರಕ್ಕೆ ಸರಿಯಾಗಿ ಮಾಹಿತಿ ಯಾಕೆ ಕೊಟ್ಟಿಲ್ಲ ಎಂದು ನಾನು ಸಿಎಂ ಮತ್ತು ಡಿಸಿಎಂ ದೆಹಲಿಗೆ ಬಂದಾಗಲೂ ಕೇಳಿದ್ದೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.