ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಜಾತ್ಯತೀತ ಎಂದು ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ
2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
Published: 27th September 2023 07:48 PM | Last Updated: 27th September 2023 07:48 PM | A+A A-

ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬುಡಕಟ್ಟು ಶಾಲೆಗೆ ಭೇಟಿಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ಅವರು ಈಗ ಚುನಾವಣೆಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರನ್ನು ನಾವು ಏನೆಂದು ಕರೆಯಬೇಕು?" ಎಂದು ಪ್ರಶ್ನಿಸಿದರು.
ಇದನ್ನು ಓದಿ: ಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ತಮಿಳುನಾಡು ಜತೆ ಮಾತುಕತೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
"ಅವರ ಹೆಸರು ಸೆಕ್ಯುಲರ್ ಎಂದು ಹೇಳುತ್ತದೆ. ಆದರೆ ಅವರು ಈಗ ಸೆಕ್ಯುಲರ್ ಉಳಿದಿದ್ದಾರೆಯೇ? ಅವರು ಹೇಳುವುದನ್ನು ನಾವು ಒಪ್ಪಿಕೊಳ್ಳಬೇಕೇ? ಕೋಮುವಾದಿ ಪಕ್ಷದೊಂದಿಗೆ ಹೋದರೂ ಅವರು ಜಾತ್ಯತೀತರೇ? ಅದನ್ನು ನಾವು ಒಪ್ಪಿಕೊಳ್ಳಬೇಕೇ? ಅವರು ಬಿಜೆಪಿಯೊಂದಿಗೆ ಹೋಗಲಿ ಅಥವಾ ಯಾರಿಗೊಂದಿಗಾದರೂ ಮೈತ್ರಿ ಮಾಡಿಕೊಳ್ಳಲಿ ನಮ್ಮ ವಿರೋಧವಿಲ್ಲ. ಆದರೆ ಅವರು ಅವರು ಜಾತ್ಯತೀತರು ಎಂದು ಹೇಳಿಕೊಳ್ಳಬಾರದು ಅಷ್ಟೇ ಎಂದರು.
ಇದನ್ನು ಓದಿ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯ
ಜೆಡಿಎಸ್, ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ಅನ್ನು ಏನೆಂದು ಕರೆಯಬೇಕು. ಜೆಡಿಎಸ್ - ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.