ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ: ಎಐಸಿಸಿ ನೋಟೀಸ್ ಬಳಿಕ ಡಿಕೆಶಿ ಭೇಟಿಯಾದ ‘ಅತೃಪ್ತ’ ಹರಿಪ್ರಸಾದ್!
ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Published: 29th September 2023 08:43 AM | Last Updated: 29th September 2023 07:54 PM | A+A A-

ಡಿ.ಕೆ ಶಿವಕುಮಾರ್ ಭೇಟಿಯಾದ ಹರಿಪ್ರಸಾದ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾರಣಕ್ಕಾಗಿ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ನೋಟಿಸ್ ಗೆ ಬಿ.ಕೆ ಹರಿಪ್ರಸಾದ್ ಉತ್ತರ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಗೆ ಹರಿಪ್ರಸಾದ್ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯ ಬಳಿಕ ಅವರು ಸೈಲೆಂಟಾಗಿದ್ದರು. ಆದರೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್
ನೋಟಿಸ್ ಪರಿಣಾಮಗಳ ಬಗ್ಗೆ ಹರಿಪ್ರಸಾದ್ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು, ಅಂತಿಮವಾಗಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಕೆಪಿಸಿಸಿ ಕರೆ ಮಾಡಬೇಕಾಗಿದೆ ಎಂದು ಮೂಲವೊಂದು ತಿಳಿಸಿದೆ. ಹರಿಪ್ರಸಾದ್ ಮತ್ತು ಶಿವಕುಮಾರ್ ಇಬ್ಬರೂ ಪರಸ್ಪರ ಸಹಾನುಭೂತಿ ಹೊಂದಿದ್ದಾರೆ.
ಸಿದ್ದರಾಮಯ್ಯ ದಲಿತ, ಅಲ್ಪಸಂಖ್ಯಾತರ ವಿರೋಧಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ಎಂದು ಹರಿಪ್ರಸಾದ್ ಆರೋಪಿಸಿದ್ದರು. ತನಗೆ ಸಚಿವ ಸ್ಥಾನ ಕೈತಪ್ಪಲು ಸಿದ್ದರಾಮಯ್ಯ ಅವರೇ ಪರೋಕ್ಷವಾಗಿ ಕಾರಣ ಎಂಬ ಅರ್ಥದಲ್ಲಿ ಅಸಮಾಧಾನ ಹೊರಹಾಕಿದ್ದರು. ಅಷ್ಟೇ ಅಲ್ಲದೆ ದೇವರಾಜು ಅರಸು ಅವರ ಕಾರಿನಲ್ಲಿ ಕುಳಿತ ತಕ್ಷಣ ಅರಸು ಆಗಲ್ಲ ಎಂದೂ ಟಾಂಗ್ ನೀಡಿದ್ದರು.
ಇದನ್ನೂ ಓದಿ: ರಣರಂಗದಲ್ಲಿ ಒಂಟಿ ಸೇನಾನಿಯಾದ ಹರಿಪ್ರಸಾದ್! (ಸುದ್ದಿ ವಿಶ್ಲೇಷಣೆ)
ಹಿರಿಯ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಯನ್ನು ಆಯೋಜಿಸುವಲ್ಲಿ ಅಪಾರ ಕೊಡುಗೆ ನೀಡಿದ್ದರಿಂದ ಪಕ್ಷದ ಹೈಕಮಾಂಡ್ ಎನ್ ಎಸ್ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಿತ್ತು. ಹೀಗಾಗಿ ಸಿದ್ದರಾಮಯ್ಯ ಸಂಪುಟದಿಂದ ತಮ್ಮನ್ನು ಹೊರಗಿಟ್ಟಿದ್ದರಿಂದ ಹರಿಪ್ರಸಾದ್ ಬೇಸರಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಂತೆ ಮಾಡಲು ಸಿದ್ದರಾಮಯ್ಯ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.