
ರಾಮಣ್ಣ ಲಮಾಣಿ
ಗದಗ: ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.
ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ವಿರುದ್ಧ ಶೆಟ್ಟರ್ ಸೇಡು: ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆಗೆ ಮುಹೂರ್ತ!
ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.