ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಶ್ರೀನಿವಾಸ್ ಪ್ರಸಾದ್ ಸಹೋದರ ಕಾಂಗ್ರೆಸ್ ಸೇರ್ಪಡೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಸಹೋದರ ವಿ.ರಾಮಸ್ವಾಮಿ ಕಾಂಗ್ರೆಸ್ ಸೇರ್ಪಡೆ
ಶ್ರೀನಿವಾಸ್ ಪ್ರಸಾದ್ ಸಹೋದರ ವಿ.ರಾಮಸ್ವಾಮಿ ಕಾಂಗ್ರೆಸ್ ಸೇರ್ಪಡೆ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ.

ನಿನ್ನೆಯಷ್ಟೇ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿ ಬಿಜೆಪಿ ಶಾಕ್ ನೀಡಿದ್ದರು. ಇದರ ಬೆನ್ನಲ್ಲೇ ಈಗ ಶ್ರೀನಿವಾಸ್ ಪ್ರಸಾದ್ ಅವರ ಸಹೋದರ ವಿ.ರಾಮಸ್ವಾಮಿ ಅವರು ಸಹ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿ.ರಾಮಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮರ್ಮಾಘಾತವಾಗಿದೆ.

ಶ್ರೀನಿವಾಸ್ ಪ್ರಸಾದ್ ಸಹೋದರ ವಿ.ರಾಮಸ್ವಾಮಿ ಕಾಂಗ್ರೆಸ್ ಸೇರ್ಪಡೆ
ರಾಜಕೀಯ ಭವಿಷ್ಯದ ಅನಿಶ್ಚಿತತೆ: ಶ್ರೀನಿವಾಸ್ ಪ್ರಸಾದ್ ಅಳಿಯ, ಬೆಂಬಲಿಗರು ಬಿಜೆಪಿಗೆ ಗುಡ್ ಬೈ; ಕಾಂಗ್ರೆಸ್ ಸೇರ್ಪಡೆ!

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ರಾಮಸ್ವಾಮಿ ಅವರು, ನಾವೆಲ್ಲರೂ ಪ್ರಾಮಾಣಿಕವಾಗಿ ಸಿದ್ದರಾಮಯ್ಯನವರ ಕೈಬಲಪಡಿಸಬೇಕು. ಸಿಎಂ ಸಿದ್ದರಾಮಯ್ಯ ಬಲ ಹೆಚ್ಚಾದಷ್ಟು ನಮ್ಮ ಕೈಗೆ ಬಲ ಬರುತ್ತೆ. ಸಿದ್ದರಾಮಯ್ಯ ನಮ್ಮ ಕ್ಷೇತ್ರದವರಾಗಿದ್ದಾರೆ. ನಮ್ಮ ಭಾಗದ ಅಭಿವೃದ್ಧಿಗೆ ಅವರಲ್ಲಿ ಮನವಿ ಮಾಡಿಕೊಳ್ಳಬಹುದು. ನಾವೆಲ್ಲಾ ಪ್ರಾಮಾಣಿಕವಾಗಿ ದುಡಿದು ‘ಕೈ’ ಅಭ್ಯರ್ಥಿ ಗೆಲ್ಲಿಸಬೇಕು. ಆಗ ಮಾತ್ರ ನಾವು ಕಾಂಗ್ರೆಸ್ ಪಕ್ಷ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com