'ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಹೇಳಿದೆನಷ್ಟೆ, ಅದೇನು ಭಾವನಾತ್ಮಕ ಮಾತಲ್ಲ': ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣದಲ್ಲಿ 60 ಸಾವಿರ ಲೀಡ್​ ಬೇಕು, ಅಷ್ಟು ಲೀಡ್​ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ
ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣದಲ್ಲಿ 60 ಸಾವಿರ ಲೀಡ್​ ಬೇಕು, ಅಷ್ಟು ಲೀಡ್​ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ಇಂದು ಮೈಸೂರಿನ ತಮ್ಮ ಟಿ.ಕೆ. ಲೇಔಟ್ ಮನೆ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವಾಗ ಸ್ಪಷ್ಟನೆ ನೀಡಿದ ಅವರು, ಅದೇನು ಭಾವನಾತ್ಮಕ ಅಲ್ಲ. ಹೆಚ್ಚು ಲೀಡ್​ ಬೇಕು ಎಂದು ಸ್ವಕ್ಷೇತ್ರದವರನ್ನು ಕೇಳಿದ್ದೇನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನಮಗೆ ಬರೀ 48 ಸಾವಿರ ಲೀಡ್​ ಬಂದಿತ್ತು. ಈ ಬಾರಿ ಅದನ್ನು 60 ಸಾವಿರಕ್ಕೆ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಬೇಡ. ಅದು ನನ್ನ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳು ಮಾತ್ರವಲ್ಲ. 28 ಲೋಕಸಭಾ ಕ್ಷೇತ್ರಗಳ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಭಾಗಕ್ಕೆ ಪ್ರವಾಸ ಬರುತ್ತೇನೆ. ಬಿಜೆಪಿವರು ಬಂದರೆ ಬಡವರ ಕಾರ್ಯಕ್ರಮಗಳು ನಿಂತು ಹೋಗುತ್ತವೆ‌. ಹೀಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.

ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ
ನಾನು ಸಿಎಂ ಸ್ಥಾನದಲ್ಲಿ ಇರಬೇಕು ಅಂದ್ರೆ 60 ಸಾವಿರ ಲೀಡ್ ಕೊಡಿ: ವರುಣಾದಲ್ಲಿ ಸಿದ್ದರಾಮಯ್ಯ

ಯತೀಂದ್ರ ನೊಟೀಸ್ ಗೆ ಉತ್ತರ ಕೊಟ್ಟಿದ್ದೇವೆ: ಇದೇ ವೇಳೆ "ನನ್ನ ಮಗ ಡಾ. ಯತೀಂದ್ರನಿಗೆ ಚುನಾವಣಾ ಆಯೋಗದಿಂದ ನೋಟಿಸ್​ ಬಂದಿದೆ. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದೇವೆ. ನೊಟೀಸ್ ನಲ್ಲಿ ಏನಿದೆ ಎನ್ನುವುದು ನನ್ನ ಮಗನಿಗೆ ಗೊತ್ತು. ನಾನು ಆ ಬಗ್ಗೆ ಮತ್ತೇನು ಪ್ರತಿಕ್ರಿಯೆ ನೀಡುವುದಿಲ್ಲ' ಎಂದರು. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹನೂರು ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ ಸಂಬಂಧ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿರುವ ಕುರಿತ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ಮಂಡ್ಯದ ಸ್ಪರ್ಧೆ ದೇವರ ಇಚ್ಛೆ ಎಂದ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಮಗನನ್ನು ಚುನಾವಣೆಗೆ ನಿಲ್ಲಿಸುವಾಗ ಯಾರ ಇಚ್ಛೆ ಇತ್ತು. ಈಗ ದೇವರು ಎಂದರೆ, ಆಗ ಯಾರಿದ್ದರು. ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತಿದ್ದನು. ಈ ಬಾರಿ ಜೆಡಿಎಸ್​ನವರು ಮೂರಕ್ಕೆ ಮೂರು ಕ್ಷೇತ್ರಗಳಲ್ಲೂ ಸೋಲುತ್ತಾರೆ. ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್​ನವರು ಕಾಂಗ್ರೆಸ್​ಗೆ ಹಾಕಿದ್ದು ಯಾವ ಚೂರಿ? ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ, ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದ್ದಾರೆ ಎಂದರೆ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ. ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದ್ದಿದ್ದು. ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ. ಪ್ರಜ್ವಲ್​ನನ್ನು ಸೋಲಿಸುತ್ತೇನೆ. ಪ್ರಜ್ವಲ್​ನನ್ನು ಸೋಲಿಸಲೇಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ. ಪ್ರಜ್ವಲ್ ಸೋಲುತ್ತಾನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಇಂದು ಮೈಸೂರಿನ ಶಂಕರ ಮಠಕ್ಕೆ ಭೇಟಿ ನೀಡಿ ಅಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯ ಆಶೀರ್ವಾದ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com