ಲೋಕಸಭೆ ಚುನಾವಣೆ: ಏಳು ಜಿಲ್ಲೆಗಳಿಗೆ ಕಾಂಗ್ರೆಸ್ ಅಧ್ಯಕ್ಷರ ನೇಮಕ; ಇಲ್ಲಿದೆ ನೂತನ ಪದಾಧಿಕಾರಿಗಳ ಪಟ್ಟಿ

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕರ್ನಾಟಕದ ಏಳು ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿದೆ. ಬಳ್ಳಾರಿ ನಗರ, ಬೆಂಗಳೂರು ಪೂರ್ವ, ಹಾವೇರಿ, ಕೊಪ್ಪಳ, ಉಡುಪಿ, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೆಸರುಗಳನ್ನು ಪಕ್ಷ ಘೋಷಿಸಿದೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕರ್ನಾಟಕದ ಏಳು ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿದೆ. ಬಳ್ಳಾರಿ ನಗರ, ಬೆಂಗಳೂರು ಪೂರ್ವ, ಹಾವೇರಿ, ಕೊಪ್ಪಳ, ಉಡುಪಿ, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೆಸರುಗಳನ್ನು ಪಕ್ಷ ಘೋಷಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೋಮವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಮಧ್ಯೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5ರಂದು ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೋಮವಾರ ಘೋಷಿಸಿದ್ದಾರೆ.

ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಿಸಿದ ಎಐಸಿಸಿ

ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ

ಬೆಂಗಳೂರು ಪೂರ್ವ – ಕೆ. ನಂದಕುಮಾರ್

ಹಾವೇರಿ – ಸಂಜೀವ್ ಕುಮಾರ್ ನೀರಲಂಗಿ

ಕೊಪ್ಪಳ – ಅಮರೇಗೌಡ ಬಯ್ಯಾಪುರ

ಉಡುಪಿ – ಕಿಶನ್ ಹೆಗ್ಡೆ

ರಾಯಚೂರು – ಬಸವರಾಜ ಇಟಗಿ

ಶಿವಮೊಗ್ಗ – ಪ್ರಸನ್ನ ಕುಮಾರ್

ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, 'ದೇಶದಾದ್ಯಂತ ಇರುವ ಜನರೊಂದಿಗೆ ವ್ಯಾಪಕ ಚರ್ಚೆ ನಡೆಸಿದ ನಂತರ, ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಬಿಡುಗಡೆ ಮಾಡಲಿದೆ. ನಂತರ ನಾವು ಏಪ್ರಿಲ್ 6 ರಂದು ಜೈಪುರ ಮತ್ತು ಹೈದರಾಬಾದ್‌ನಲ್ಲಿ ಎರಡು ಮೆಗಾ ರ್ಯಾಲಿಗಳನ್ನು ನಡೆಸುತ್ತೇವೆ' ಎಂದು ಹೇಳಿದ್ದಾರೆ.

'ಜೈಪುರದಲ್ಲಿ ಐಎನ್‌ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ರಾಹುಲ್ ಗಾಂಧಿ ಅವರು ಹೈದರಾಬಾದ್‌ನಲ್ಲಿ ಪ್ರಣಾಳಿಕೆ ಬಿಡುಗಡೆ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ
ರಾಜ್ಯದಲ್ಲಿ ರಾಮ ಮಂದಿರದ ಅಲೆ ಇಲ್ಲ, ಕಾಂಗ್ರೆಸ್ 18-20 ಸ್ಥಾನ ಗೆಲ್ಲಲಿದೆ: ತನ್ವೀರ್ ಸೇಠ್

ನಮ್ಮ ಗಮನವು ಯಾವಾಗಲೂ ದೇಶಕ್ಕೆ ಕಲ್ಯಾಣ ಆಧಾರಿತ, ಅಭಿವೃದ್ಧಿ ಪರ ದೃಷ್ಟಿಯನ್ನು ನೀಡುವುದರ ಮೇಲೆ ಕೇಂದ್ರೀಕೃತವಾಗಿದೆ ಮತ್ತು ಅದನ್ನು ಈ ಚುನಾವಣೆಯಲ್ಲೂ ಜನರಿಗೆ ಪ್ರಸ್ತುತಪಡಿಸಲಾಗುವುದು ಎಂದಿದ್ದಾರೆ.

ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ಬಿರುಸಿನ ಹೋರಾಟವನ್ನು ನಿರೀಕ್ಷಿಸಲಾಗಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ
40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಏಪ್ರಿಲ್ 26 ರಂದು ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಉಳಿದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮೇ 7 ರಂದು ಮತದಾನ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com