ಇಬ್ರೂ ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿಎಂಗೆ ಜಿಟಿಡಿ ಸವಾಲು!

ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ. ಯಾರು ಗೆಲುತ್ತಾರೆ ನೋಡೋಣ ಬನ್ನಿ ಎಂದು ಸವಾಲು ಹಾಕಿದರು.
ಜಿ ಟಿ ದೇವೇಗೌಡ ಮತ್ತು ಸಿದ್ದರಾಮಯ್ಯ
ಜಿ ಟಿ ದೇವೇಗೌಡ ಮತ್ತು ಸಿದ್ದರಾಮಯ್ಯ

ಮೈಸೂರು: ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ. ಯಾರು ಗೆಲುತ್ತಾರೆ ನೋಡೋಣ ಬನ್ನಿ ಎಂದು ಸವಾಲು ಹಾಕಿದರು.

ಅಭಿವೃದ್ಧಿ ಎಂದರೆ ಏನು ಎಂಬುದೇ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಮಾಡದೇ ರಾಜಕೀಯದಲ್ಲಿ ಬೆಳೆದಿದ್ದಾರೆ ಎಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಟೀಕಿಸಿದರು. ಮುಖ್ಯಮಂತ್ರಿಯು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.

ಜಿ ಟಿ ದೇವೇಗೌಡ ಮತ್ತು ಸಿದ್ದರಾಮಯ್ಯ
ತಿಂಗಳು ತಡ ಮಾಡಿ ಕೇಳಿದ್ದರು, ಅದಕ್ಕೇ ನೆರವು ದೊರೆತಿಲ್ಲ: ಅಮಿತ್ ಶಾ ಹೇಳಿಕೆ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಚಾಮುಂಡೇಶ್ವರಿ ಉಪ ಉಪ ಚುನಾವಣೆ ವೇಳೆ ನಾನು ಜೆಡಿಎಸ್ ಪರ ಪ್ರಚಾರಕ್ಕೆ ಹೋಗಲಿಲ್ಲ. ಅದಕ್ಕಾಗಿ ಆಗ ನೀವು ಗೆದ್ರಿ. ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಎಷ್ಟು ಸಲ ಪ್ರಯತ್ನ ಪಟ್ರಿ? ನನ್ನನ್ನು ಕಾಯುವುದಕ್ಕೆ ದೈವ ಇಲ್ವಾ, ಧರ್ಮ ಇಲ್ವಾ? ಅದ್ಹೇಗೆ ಸೋಲಿಸ್ತೀರಿ ನೀವು ನನ್ನ? ಎಂದು ಆಕ್ರೋಶದಿಂದ ಕೇಳಿದರು.

ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ಮುಗಿದು ಹೋಯಿತು. ಯಾಕೆ ಪದೇ ಪದೇ ಹೀಗೆ ನನ್ನ ಬಗ್ಗೆ ಮಾತನಾಡುತ್ತೀರಿ? ಯಾವಾಗಲೂ ಮುಖ್ಯಮಂತ್ರಿಯಾಗಿಯೇ ಇರುತ್ತೇನೆ ಎಂದು ತಿಳಿದಿದ್ದೀರಾ' ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com