ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಭಿನ್ನಮತ: ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ನಾಪತ್ತೆ!

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಕಲಹ ಬಹಿರಂಗವಾದ ನಂತರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.
ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ
ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ
Updated on

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಕಲಹ ಬಹಿರಂಗವಾದ ನಂತರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದಂತೆಯೇ ಹಲವು ಪ್ರಮುಖ ನಾಯಕರು ನಾಪತ್ತೆಯಾಗಿದ್ದಾರೆ.

ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಶಾಂತಿನಗರ ಶಾಸಕ ಎನ್.ಎ.ಹರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್, ಎರಡನೇ ಸ್ಥಾನ ಬೆಂಗಳೂರು ಕೇಂದ್ರ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದ್ದಾರೆ. ಮತ್ತು ಐದನೆಯವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ನಾಸೀರ್ ಅಹಮದ್, ಅವರು ಸಹ ಸ್ಥಾನದ ಆಕಾಂಕ್ಷಿಯಾಗಿದ್ದರು.

ಹ್ಯಾರೀಸ್ ಅವರ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ತಪ್ಪಿಸಿಕೊಂಡರು, ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಮಂಗಳೂರಿನಲ್ಲಿ ಇರಬೇಕು ಎಂಬ ಕಾರಣ ನೀಡಿದ್ದಾರೆ. ಜಾರ್ಜ್ ಅವರು ಉಡುಪಿ-ಚಿಕ್ಕಮಗಳೂರು ಉಸ್ತುವಾರಿ ಹೀಗಾಗಿ ಬರಲಾಗದು ಎಂದು ಕ್ಷಮೆಯಾಚಿಸಿದರು, ಜಮೀರ್ ಅಹ್ಮದ್ ಕೇರಳಕ್ಕೆ ಹೋಗಿದ್ದರು ಎನ್ನಲಾಗಿದೆ.

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಸಲೀಂ ಅಹಮದ್ ಮತ್ತು ಎಂಎಲ್‌ಸಿ ಪುಟ್ಟಣ್ಣ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಕೂಡ ಕೊನೆಯ ಕ್ಷಣದಲ್ಲಿ ಭಾಗಿಯಾದರು.

ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ
ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ ವಿರುದ್ಧವೇ ಸ್ವಪಕ್ಷೀಯರ ಕೆಲಸ?

ಆದರೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮನ್ಸೂರ್ ಖಾನ್ ಸಮರ್ಥಿಸಿಕೊಂಡಿದ್ದಾರೆ. ನಾಮಪತ್ರ ಸಲ್ಲಿಸಲು ಮೊದಲು ಏಪ್ರಿಲ್ 2ಕ್ಕೆ ನಿರ್ದರಿಸಲಾಗಿತ್ತು, ನಂತರ ನಾನು ಏಪ್ರಿಲ್ 3 ಕ್ಕೆ ಉಮೇದುವಾರಿಕೆ ಸಲ್ಲಿಕೆಗೆ ತೀರ್ಮಾನಿಸಿದೆ. ಹೀಗಾಗಿ ನಾಯಕರು ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಮನ್ಸೂರ್ ಖಾನ್ ಅವರ ಗೆಲುವಿಗೆ ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಅವರು ಉತ್ತಮ ಶಿಕ್ಷಣ ಪಡೆದಿದ್ದಾರೆ ಮತ್ತು ಕ್ಷೇತ್ರಕ್ಕೆ ಹೊಸ ಮುಖ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಆದರೆ ನಾಯಕರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com