ಗ್ಯಾರಂಟಿಗಳ ಮೂಲಕ ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ HDK ಕಿಡಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ವಾಸ್ತವವೆಂದರೆ ಈ ಯೋಜನೆಗಳಿಗೆ ಕೋಟಿಗಟ್ಟಲೆ ಸಾಲ ಮಾಡಿ ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ಆರೋಪಿಸಿದರು.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ತುಮಕೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ವಾಸ್ತವವೆಂದರೆ ಈ ಯೋಜನೆಗಳಿಗೆ ಕೋಟಿಗಟ್ಟಲೆ ಸಾಲ ಮಾಡಿ ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ಆರೋಪಿಸಿದರು.

ತುಮಕೂರಿನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಕಾಂಗ್ರೆಸ್ ನಾಯಕರು ಗ್ಯಾರಂಟಿಗಳ ಬಗ್ಗೆ ಬೆಟ್ಟದಷ್ಟು ಮಾತನಾಡುತ್ತಿದ್ದಾರೆ. ಆದರೆ, ಯೋಜನೆಗೆ ನಾಡಿನ ಜನರ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುತ್ತಿದ್ದಾರೆ. ಯೋಜನೆ ಜಾರಿಗೆ ಸಾಲ ತರುತ್ತಿದ್ದಾರೆ.

ಜಾತಿ ಆಧಾರದ ಮೇಲೆ ಲೋಕಸಭೆ ಚುನಾವಣೆ ನಡೆಯುತ್ತಿಲ್ಲ. ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿರುವ ಎಸ್.ಪಿ.ಮುದ್ದಹನುಮೇಗೌಡ ಅವರು ಈಗ ಒಕ್ಕಲಿಗರು ಎಂದು ಹೇಳಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಎಚ್.ಡಿ.ದೇವೇಗೌಡ ಅವರು ಸ್ಪರ್ಧಿಸಿದಾಗ ಏಕೆ ವಿರೋಧ ಮಾಡಿದರು. ಈಗ ಏಕೆ ಜಾತಿ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಈ ಬಾರಿ ನಮ್ಮ ಅಭ್ಯರ್ಥಿ (ಸೋಮಣ್ಣ) ಆಯ್ಕೆಯಾದರೆ ಕೊಬ್ಬರಿ ಬೆಲೆ ಏರಿಕೆ ಮಾಡುವ ಭರವಸೆ ನೀಡಿದರು.

ನೀವು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದರೆ, ಪ್ರತಿ ಕ್ವಿಂಟಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 15,000 ರಿಂದ 16,000 ರೂ.ಗೆ ಏರಿಸಲಾಗುವುದು. ಒಂದು ವೇಶೆ ಮುದ್ದಹನುಮೇಗೌಡ ಗೆದ್ದರೆ ಅದು ಸಾಧ್ಯವಾಗುವುದಿಲ್ಲ ಎಂದರು.

ಎಚ್.ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಠೇವಣಿಯನ್ನೂ ಕಳೆದುಕೊಳ್ಳಲಿದ್ದಾರೆ: BSY

ಬುಧವಾರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಗೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರು, ಈ ಅಪಾರ ಜನಸ್ತೋಮ ಪಕ್ಷದ ಅಭ್ಯರ್ಥಿಯ ಗೆಲುವಿನ ಸೂಚಕವಾಗಿದೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಜನರು ಮೈತ್ರಿ ಅಭ್ಯರ್ಥಿ (ಸೋಮಣ್ಣ) ಅವರಿಗೆ ಬೆಂಬಲ ನೀಡಬೇಕು. ನಾಮಪತ್ರ ಹಿಂಪಡೆಯುವುದು ಕಾಂಗ್ರೆಸ್‌ಗೇ ಉತ್ತಮ. ಇಲ್ಲದಿದ್ದರೆ (ಮುದ್ದಹನುಮೇಗೌಡ) ಠೇವಣಿ ಕಳೆದುಕೊಳ್ಳುವುದು ಖಚಿತ ಎಂದು ತಿಳಿಸಿದರು.

ಹಿಂದಿನ ಬಿಜೆಪಿ ಸರಕಾರ ಆರಂಭಿಸಿದ್ದ ಕಿಸಾನ್ ಸಮ್ಮಾನ್ ಮತ್ತು ಭಾಗ್ಯಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರಕಾರ ನಿಲ್ಲಿಸಿದೆ. ಇದು ಸರ್ಕಾರ ದಿವಾಳಿಯಾಗಿದೆ ಎಂಬುದನ್ನು ತೋರಿಸುತ್ತದೆ. ಇಂತಹ ಜನಪರ ಯೋಜನೆಗಳನ್ನು ಏಕೆ ನಿಲ್ಲಿಸಿದ್ದೀರಿ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com