ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್, ಮಂಜುನಾಥ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಚಿತ್ರ
ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಚಿತ್ರ

ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್, ಮಂಜುನಾಥ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಯದುವೀರ್ ಒಡೆಯರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಚಿತ್ರ
ಎಚ್.ಡಿ ಕುಮಾರಸ್ವಾಮಿ ಬದುಕಿದ್ದರೂ ಸಿದ್ಧಾಂತದಲ್ಲಿ ಸತ್ತಂತೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಇದಕ್ಕೂ ಮುನ್ನಾ, ನಗರದ ಕಾವೇರಿ ಭವನದ ಮುಂಭಾಗದಲ್ಲಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಜಯಚಾಮರಾಜೇಂದ್ರ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರುಗಳ ಪುತ್ಥಳಿ ಗೌರವ ಸಲ್ಲಿಸಿದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿತ್ತು. ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ ಕರ್ನಾಟಕದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ ಉಳಿದ ಮೂರರಲ್ಲಿ ಸ್ಪರ್ಧಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com