ಲೋಕಸಭಾ ಚುನಾವಣೆ: ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on: 

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಂತೆ ಸಂಸತ್ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಲಿದೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್
ದೇಶದಲ್ಲಿ ಮೋದಿ ಅಲೆ ಇಲ್ಲ, ಬಿಜೆಪಿ 200 ಸ್ಥಾನವನ್ನೂ ಗೆಲ್ಲಲ್ಲ: ಡಿಕೆ ಶಿವಕುಮಾರ್ ಭವಿಷ್ಯ

ಈ ಚುನಾವಣೆ ನನಗೆ ಮುಖ್ಯವಲ್ಲ ಆದರೆ, ದೇಶ ಮತ್ತು ರಾಜ್ಯಕ್ಕೆ ಮಹತ್ವದ್ದಾಗಿದೆ. ದೇಶ ಹೊಸ ಬದಲಾವಣೆಯನ್ನು ಹೊಂದಬೇಕಾಗಿದೆ. ಕೋವಿಡ್ 19 ಅವಧಿಯಲ್ಲಿ ಜನರು ಎದುರಿಸಿದ ಕಷ್ಟ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಅಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದ್ದವರನ್ನು ಜನರು ನೆನಪಿಸಿಕೊಳ್ಳಲಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com