'ಅಹಿಂದ' ಮತಗಳತ್ತ HDK ಚಿತ್ತ: ಮೋದಿ ಕೈ ಬಲಪಡಿಸಲು ಬೆಂಬಲ ನೀಡುವಂತೆ ದಲಿತರು, ಮುಸ್ಲಿಮರಿಗೆ ಮನವಿ!

ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಅಲ್ಪಸಂಖ್ಯಾತರು ಮತ್ತು ದಲಿತರು ಬೆಂಬಲ ನೀಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಮನವಿ ಮಾಡಿಕೊಂಡರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
Updated on

ಮಂಡ್ಯ: ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಅಲ್ಪಸಂಖ್ಯಾತರು ಮತ್ತು ದಲಿತರು ಬೆಂಬಲ ನೀಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಮನವಿ ಮಾಡಿಕೊಂಡರು.

ಈ ಹಿಂದಿನ ಚುನಾವಣೆಯಲ್ಲಿ ಪುತ್ರ ನಿಖಿಲ್ ಸೋಲಿಗೆ ಅಹಿಂದ ಮತಗಳ ಸಿಗದೆ ಇದ್ದದ್ದು ಕಾರಣವಾಗಿತ್ತು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ಸಮುದಾಯ ಮನವೊಲಿಸಲು ಯತ್ನ ನಡೆಸುತ್ತಿದ್ದಾರೆ.

ನಿನ್ನೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಕುಮಾರಸ್ವಾಮಿಯವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ತಮಿಳುನಾಡು ರಾಜ್ಯಕ್ಕೆ ಉದಾರವಾಗಿ ಕಾವೇರಿ ನೀರನ್ನು ಹರಿಸಿತು. ಆದರೆ, ನಮ್ಮ ರೈತರ ಬೆಳೆಗಳಿಗೆ ನೀರು ನೀಡದೆ, ಬೆಳೆಗಳು ಒಣಗುವಂತೆ ಮಾಡಿದ್ದಾರೆ. ಕಬ್ಬಿನ ಗದ್ದೆಗಳನ್ನು ನೋಡಿದರೆ, ಹೃದಯ ಕಿತ್ತು ಬರುತ್ತಿದೆ ಎಂದು ಕಿಡಿಕಾರಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
ಕೊನೆ ದಿನ ನಾಮಪತ್ರ ಸಲ್ಲಿಕೆ ಭರಾಟೆ: ಕುಮಾರಸ್ವಾಮಿ, ತೇಜಸ್ವಿ ಸೂರ್ಯ, ಮುದ್ದಹನುಮೇಗೌಡ ಸೇರಿ ಹಲವರಿಂದ ಉಮೇದುವಾರಿಕೆ

ಇದೇ ವೇಳೆ ತಾವು ಮುಖ್ಯಮಂತ್ರಿಯಾಗಿದ್ದಾಗ 25 ಸಾವಿರ ರೂ. ಕೃಷಿ ಸಾಲ ಮನ್ನಾ ಮಾಡಿದ್ದನ್ನು ಸ್ಮರಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಸರಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ, ಸಂತ್ರಸ್ತ ರೈತರಿಗೆ ಬರ ಪರಿಹಾರ ನೀಡಲು ಕೇಂದ್ರದ ಹಣಕ್ಕಾಗಿ ಏಕೆ ಕಾಯಬೇಕು ಎಂದು ಪ್ರಶ್ನಿಸಿದರು.

ಬಳಿಕ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮಾಜಿ ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡರು. ಇದಕ್ಕಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಧನ್ಯವಾದ ಅರ್ಪಿಸಿದರು,

ನಂತರ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಹಣ ತರದಿದ್ದರೆ ರಾಜಕೀಯ ನಿವೃತ್ಥಿ ಘೋಷಿಸುವುದಾಗಿ ಹೇಳಿದರು.

ನಾಡಿನ ನೀರಾವರಿ ಯೋಜನೆಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಸಮರ್ಥವಾಗಿ ದನಿಯೆತ್ತಬೇಕಿದೆ. ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ಕಾವೇರಿ ಕಣಿವೆ ಜನರಿಗೆ ಶಾಶ್ವತ ಪರಿಹಾರ ದೊರಕಿಸಬೇಕಿದೆ. ಅದಕ್ಕಾಗಿ ದೇವೇಗೌಡರ ಮಾದರಿಯಲ್ಲಿ ರೈತರಿಗೆ ಧ್ವನಿಯಾಗಿ ಕೆಲಸ ಮಾಡುವುದಕ್ಕೆ ಅವಕಾಶ ನೀಡುವಂತ ಕೋರಲು ನಿಮ್ಮ ಮುಂದೆ ನಿಂತಿರುವುದಾಗಿ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ನಂತರ ತಮ್ಮ ತಂದೆ ಎಚ್.ಡಿ.ದೇವೇಗೌಡರ ನಾಯಕತ್ವವನ್ನು ದಶಕಗಳಿಂದ ಬೆಂಬಲಿಸಿದ್ದಕ್ಕಾಗಿ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ದೇವೇಗೌಡ ಅವರು ಜಿಲ್ಲೆಗೆ ನೀಡಿದ ಕೊಡುಗೆಗಳನ್ನು ವಿವರಿಸಿ, 1977 ವರೆಗೂ ಎಲ್ಲಾ ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌ನ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಇದೇ ವೇಳೆ ಕನಕಪುರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕೊಡುಗೆಯನ್ನು ಪ್ರಶ್ನಿಸಿದ ಅವರು, ಈ ಬಾರಿ ಎಂಟು ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡ್ಯದ ಜನರು ರೈತರ ಮತ್ತು ಬಡವರ ಧ್ವನಿಯಾಗಿರುವ ನಮ್ಮ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆಯ ಚುನಾವಣಾ ಹೋರಾಟಕ್ಕೆ ಧಾರಾಳವಾಗಿ ಖರ್ಚು ಮಾಡುತ್ತಿರುವ ಕಾಂಗ್ರೆಸ್ ಅನ್ನು ನಂಬುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com