ಲೋಕಸಭಾ ಚುನಾವಣೆ ನಂತರ ಮೋದಿ ಕೆಳಗಿಳಿದು, ರಾಹುಲ್ ಪ್ರಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಿಂದ ಕೆಳಗಿಳಿದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಜನರಿಗೆ ಕರೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತಿತರರು
ಸಿಎಂ ಸಿದ್ದರಾಮಯ್ಯ ಮತ್ತಿತರರು

ಕೋಲಾರ: ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಿಂದ ಕೆಳಗಿಳಿದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಜನರಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಯಾವಾಗಲೂ ಕೊಟ್ಟ ಮಾತಿನಂತೆ ನಡೆಯುತ್ತದೆ. ಬಿಜೆಪಿಗಿಂತ ಭಿನ್ನವಾಗಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದು ಪ್ರತಿಪಾದಿಸಿದ ಅವರು, ಪಕ್ಷವು ಅಧಿಕಾರಕ್ಕೆ ಬಂದ ಕರ್ನಾಟಕದಲ್ಲಿ ನೀಡಲಾದ ಭರವಸೆ ಈಡೇರಿಸದಂತೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

"ಕಾಂಗ್ರೆಸ್ ನಿನ್ನೆ ಗ್ಯಾರಂಟಿಗಳನ್ನು ಘೋಷಿಸಿದೆ, ಅವುಗಳನ್ನು ನಾವು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಭಿನ್ನವಾಗಿ ಯಾವಾಗಲೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ. ನೀವು ಅದನ್ನು ಅರ್ಥಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರವನ್ನು ತೆಗೆದುಹಾಕುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದರು.

ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯನ್ನು "ಸುಳ್ಳಿನ ಕಾರ್ಖಾನೆ" ಎಂದು ಕರೆದರು ಮತ್ತು ಸೋಲಿನ ಭಯದಿಂದ ಬಿಜೆಪಿಯವರು ಸೃಷ್ಟಿಸುವ ಸುಳ್ಳಿಗೆ ಬೀಳಬೇಡಿ, ತಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ.ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ನಿಮ್ಮ ಮತವನ್ನು ಗೌರವಿಸಿದ್ದೇವೆ ಎಂದರು.

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆಕಾಳು ಮತ್ತು ತರಕಾರಿಗಳ ಬೆಲೆಯನ್ನು ಹೆಚ್ಚಿಸಿದೆ, ಇದರಿಂದಾಗಿ ದೇಶದ ಪ್ರತಿಯೊಂದು ಕುಟುಂಬವೂ ತೊಂದರೆಗೀಡಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಈ ಸಂಕಷ್ಟಕ್ಕೆ ಸ್ಪಂದಿಸಿ ನಾವು ಐದು ಗ್ಯಾರಂಟಿ ಘೋಷಿಸಿದ್ದೇವೆ. ಗ್ಯಾರಂಟಿ ಸಂಕಷ್ಟ ನಿವಾರಿಸುವ ಭರವಸೆ ನೀಡಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಐದನ್ನೂ ಜಾರಿಗೆ ತಂದಿದ್ದೇವೆ. ಮೊದಲಿಗೆ ಬಿಜೆಪಿಯವರು ಈ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಿಲ್ಲ ಎಂಬ ಸುಳ್ಳನ್ನು ಸೃಷ್ಟಿಸಿದರು. ಆದರೆ ಗ್ಯಾರಂಟಿಗಳು ಜಾರಿಯಾದ ನಂತರ ಹೊಸ ಸುಳ್ಳನ್ನು ಸೃಷ್ಟಿಸಿದ್ದಾರೆ. ಗ್ಯಾರಂಟಿ ನಿಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ.. ಕಾಂಗ್ರೆಸ್ ಗ್ಯಾರಂಟಿಗೆ ಐದು ವರ್ಷ ವಾರಂಟಿ ಇದೆ ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ಮತ್ತಿತರರು
ಬಿಜೆಪಿ ಸುಳ್ಳಿನ ಮೇಲೆ, ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಸೋಲಿನ ಭಯದಿಂದ ಬಿಜೆಪಿಯವರು ಹುಟ್ಟು ಹಾಕುವ ಸುಳ್ಳಿಗೆ ಬೀಳಬೇಡಿ, ಬಿಜೆಪಿ ಸುಳ್ಳಿನ ಕಾರ್ಖಾನೆಯಾಗಿದೆ, ಕೊಟ್ಟ ಮಾತಿಗೆ ಬದ್ಧರಾಗಿ ನಿಮ್ಮ ಮತಕ್ಕೆ ಗೌರವ ನೀಡಿದ್ದೇವೆ, ನಿಮ್ಮ ಮತಕ್ಕೆ ಮೌಲ್ಯ ತರುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com