ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಅವರು ಮುಂದಿನ ಭಾನುವಾರ ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದಾರೆ. ಬಳಿಕ ರಾಮನಗರ ಅಥವಾ ಚೆನ್ನಪಟ್ಟಣದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ಪ್ರಧಾನಿ ಮೋದಿ ರೋಡ್ ನಡೆಸಲಿದ್ದಾರೆ.

ಪ್ರಧಾನಿ ಮೋದಿ
ಜಬಲ್‌ಪುರದಲ್ಲಿ ಬೃಹತ್ ರೋಡ್‌ಶೋ ಮೂಲಕ ಮಧ್ಯ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ

ಪ್ರಧಾನಿ ಮೋದಿ ಸುಮಾರು 10 ಕಿ. ಮೀ. ಗಳಷ್ಟು ದೂರ ರೋಡ್ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com