ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ

ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧೆ ಬೇಡ: ಈಶ್ವರಪ್ಪಗೆ ವಿಜಯೇಂದ್ರ ಮನವಿ

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಹೋದರ ಹಾಗೂ ಹಾಲಿ ಸಂಸದ ಬಿ ವೈ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿಯದಂತೆ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.
Published on

ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಹೋದರ ಹಾಗೂ ಹಾಲಿ ಸಂಸದ ಬಿ ವೈ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿಯದಂತೆ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕೆ.ಇ.ಕಾಂತೇಶ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ ಅವರು, ಶಿವಮೊಗ್ಗದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹಿರಿಯ ಪುತ್ರ ವಿಜಯೇಂದ್ರ ಅವರ ಅಣ್ಣ ರಾಘವೇಂದ್ರ ವಿರುದ್ಧ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಜಯೇಂದ್ರ ಅವರು, ಈಶ್ವರಪ್ಪ ಅವರು ಹಿರಿಯ ನಾಯಕರಾಗಿದ್ದು, ಯಡಿಯೂರಪ್ಪ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರೊಂದಿಗೆ ಪಕ್ಷವನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಪ್ರಸ್ತುತ ಪರಿಸ್ಥಿತಿಗೆ ಕೆಲವು ಸನ್ನಿವೇಶಗಳು ಮತ್ತು ಮನಸ್ಥಿತಿಯೇ ಕಾರಣವಾಗಿವೆ, ಇಡೀ ದೇಶವು ಪ್ರಧಾನಿ ಮೋದಿ ಅವರನ್ನು ಶ್ಲಾಘಿಸುತ್ತಿರುವಾಗ ದಯವಿಟ್ಟು ನಿಮ್ಮ ದುಃಖವನ್ನು ಬದಿಗಿಟ್ಟು ಪಕ್ಷವನ್ನು ಬಲಪಡಿಸಲು ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿ.ವೈ ವಿಜಯೇಂದ್ರ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ FIR ದಾಖಲು

ರಾಘವೇಂದ್ರ ಕ್ರಿಯಾಶೀಲ ಸಂಸದರಾಗಿದ್ದು, ಶಿವಮೊಗ್ಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಕನಿಷ್ಠ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇನ್ನೂ ಕಾಲ ಮಿಂಚಿಲ್ಲ. ನಿಮ್ಮ ನಿರ್ಧಾರದಿಂದ ಹಿಂದೆ ಸರಿಯಿರಿ ಎಂದು ಸಲಹೆ ನೀಡಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರ ಪರವಾಗಿ ನಾನು ನಿಮ್ಮಲ್ಲಿ ಪ್ರಾರ್ಥಿಸುತ್ತಿದ್ದೇನೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಯಾವಾಗಲೂ ಅವಕಾಶವಿದೆ. ನಿಮಗೆ ಯಾವುದೇ ಕುಂದುಕೊರತೆಗಳಿದ್ದರೆ, ದೆಹಲಿಯ ನಾಯಕರನ್ನು ಭೇಟಿ ಮಾಡಿ, ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ. ನಾವು ನಿಮ್ಮೊಂದಿಗಿದ್ದೇವೆ. ನಮ್ಮ ಕಾರ್ಯಕರ್ತರೊಂದಿಗೆ ಇರಿ ಎಂದು ಹೇಳಿದರು.

ಇದೇ ವೇಳೆ ಚುನಾವಣಾ ಪ್ರಚಾರದ ವೇಳೆ ಈಶ್ವರಪ್ಪ ಅವರು ಮೋದಿಯವರ ಫೋಟೋ ಬಳಸಿದ್ದರ ಕುರಿತು ಪ್ರತಿಕ್ರಿಯಿಸಲು ವಿಜಯೇಂದ್ರ ನಿರಾಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com