ಕಾಂಗ್ರೆಸ್ ಸರ್ಕಾರ ಸದೃಢ ಮತ್ತು ಸ್ಥಿರವಾಗಿದೆ: 'ದಿವಾಳಿ' ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ "ಸದೃಢ" ಮತ್ತು "ಸ್ಥಿರವಾಗಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರೋಡ್ ಶೋ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರೋಡ್ ಶೋ

ಬೆಂಗಳೂರು: ಕರ್ನಾಟಕದಲ್ಲಿ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ "ಸದೃಢ" ಮತ್ತು "ಸ್ಥಿರವಾಗಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಪಕ್ಷ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ಬುದ್ಧಿಶಕ್ತಿಯೇ ‘ದಿವಾಳಿ’ಯಾಗಿದೆ ಹೊರತು ರಾಜ್ಯ ಸರ್ಕಾರ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ದಿನಾಲೂ ಸುಳ್ಳು ಹೇಳಿ ಮುಜುಗರಕ್ಕೀಡಾಗಬೇಡಿ. ಬಯಲಿಗೆಳೆದಾಗ ಸಮರ್ಥಿಸಿಕೊಳ್ಳಲು ಇನ್ನಷ್ಟು ಸುಳ್ಳುಗಳನ್ನು ತಯಾರಿಸಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಳೆದ ವರ್ಷ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 10,000 ಕೋಟಿ ರೂಪಾಯಿ ಸಾಲದ ಕಾರಣದಿಂದ ರಾಜ್ಯ ಸರ್ಕಾರ ದಿವಾಳಿಯಾಗುತ್ತಿದೆ ಎಂದು ಕೇಸರಿ ಪಕ್ಷ ಆರೋಪಿಸಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಸಾಲದ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿ ಎಂದು ಸಿದ್ದರಾಮಯ್ಯ ಹೇಳಿದರು.

2020-21ರ ಆರ್ಥಿಕ ವರ್ಷದಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 84,528 ಕೋಟಿ ರೂಪಾಯಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ, 2021-22 ರಲ್ಲಿ 67,332 ಕೋಟಿ ರೂ ಹೆಚ್ಚುವರಿ ಸಾಲ ಮಾಡಿದ್ದರು ಮತ್ತು 2022-23 ರಲ್ಲಿ ಸಾಲದ ಮೊತ್ತವು 72,000 ಕೋಟಿಗೆ ತಲುಪಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರೋಡ್ ಶೋ
ಸಿಎಂ ಸಿದ್ದರಾಮಯ್ಯ ರೋಡ್ ಶೋ ವೇಳೆ ಭದ್ರತಾ ಲೋಪ: ಗನ್ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಸಿದ್ದುಗೆ ಮಾಲಾರ್ಪಣೆ, ಆತಂಕ ಸೃಷ್ಟಿ!

"ಈ ಸಾಲವನ್ನು ಮರುಪಾವತಿಸಲು, 2022-23 ರಲ್ಲಿ 43,580 ಕೋಟಿ ರೂ. ವ್ಯಯಿಸಲಾಗಿದೆ. ಪರಿಣಾಮವಾಗಿ, ಈ ಸಾಲಗಳನ್ನು ತೀರಿಸುವ ಜವಾಬ್ದಾರಿ ಈಗ ನಮ್ಮ ಮೇಲೆ ಬಿದ್ದಿದೆ" ಎಂದು ಅವರು ಹೇಳಿದರು.

‘ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮುನ್ನ ನಿಮ್ಮ ಸ್ವಂತ ಬೊಮ್ಮಾಯಿಯವರನ್ನಾದರೂ ಕೇಳಬೇಕಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದ 2018ರವರೆಗೆ ರಾಜ್ಯ ಸರ್ಕಾರದ ಒಟ್ಟು 2.42 ಲಕ್ಷ ಕೋಟಿ ರೂ. ಸಾಲ ಮಾಡಿದ್ದರೆ, 2018ರಿಂದ 2023ರವರೆಗೆ ಐದು ವರ್ಷಗಳಲ್ಲಿ ಈ ಸಾಲ 5.40 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಸಾಲ ಮೂರು ಲಕ್ಷ ಕೋಟಿ ರೂ.ಗಳಷ್ಟು ಏರಿಕೆಯಾಗಿದ್ದು, ಬಿಜೆಪಿ ಕರ್ನಾಟಕ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಸಾಲ ಹೆಚ್ಚಳಕ್ಕೆ ಕಾರಣವಾದ ಪಕ್ಷದ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com