ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!

ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!

ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.
Published on

ಮೈಸೂರು: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.

ಆದರೆ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಪ್ರಕಾರ, ಏಪ್ರಿಲ್ 26ರಂದು ನಡೆಯುವ ಚುನಾವಣೆಯ ಅಭ್ಯರ್ಥಿಗಳ ನಾಮನಿರ್ದೇಶನಗಳಲ್ಲಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಮಾಣದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಇದು ಮಹಿಳಾ ಮೀಸಲಾತಿ ಬಗ್ಗೆ ಚಿಂತೆಯನ್ನು ಹುಟ್ಟುಹಾಕುತ್ತಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!
ಬದ್ಧತೆ ಈಡೇರಿಸಿದ್ದೇವೆ: ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಮಹಿಳಾ ವೃಂದಕ್ಕೆ ಪ್ರಧಾನಿ ಮೋದಿ ಅಭಿನಂದನೆ

14 ಕ್ಷೇತ್ರಗಳಿಗೆ (ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ) ನಾಮಪತ್ರ ಸಲ್ಲಿಸಿದ ಒಟ್ಟು 338 ಅಭ್ಯರ್ಥಿಗಳ ಪೈಕಿ ಕೇವಲ 25 ಮಹಿಳೆಯರಿದ್ದಾರೆ. ನಾಮಪತ್ರದ ಸಲ್ಲಿಕೆಯ ಶೇಕಡಾ 8ಕ್ಕಿಂತ ಕಡಿಮೆ ಪ್ರತಿನಿಧಿಸುತ್ತಿದ್ದಾರೆ. ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳಾ ಪ್ರತಿನಿಧಿಗಳ ಭಾಗವಹಿಸುವಿಕೆಯ ಉದ್ದೇಶಿತ ಗುರಿ ಮತ್ತು ಪ್ರಸ್ತುತ ವಾಸ್ತವತೆಯ ನಡುವಿನ ಈ ವ್ಯತ್ಯಾಸವು ಚುನಾವಣಾ ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಬೆಳೆಸುವಲ್ಲಿ ವ್ಯವಸ್ಥಿತ ಸವಾಲುಗಳನ್ನು ಎತ್ತಿ ತೋರಿಸುತ್ತದೆ.

ಮಹಿಳಾ ಮೀಸಲಾತಿ ಮಸೂದೆಯು ನಿರ್ಧಾರ ತೆಗೆದುಕೊಳ್ಳುವ ಪಾತ್ರಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಯತ್ನದಲ್ಲಿರುವಾಗ, ಮಹಿಳಾ ಅಭ್ಯರ್ಥಿಗಳ ಪ್ರಾತಿನಿಧ್ಯವು ಸರ್ಕಾರ ಮತ್ತು ನಾಗರಿಕ ಸಮಾಜ ಸಂಸ್ಥೆಗಳಿಂದ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒತ್ತಿಹೇಳುತ್ತದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!
ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ; ನಾಳೆ ರಾಜ್ಯಸಭೆಯಲ್ಲಿ ಮಂಡನೆ ಸಾಧ್ಯತೆ

ಈ ಬಗ್ಗೆ ಮಾತನಾಡಿದ ಕಾರ್ಯಕರ್ತೆ ಸ್ವಾತಿ, ಮಹಿಳಾ ನಾಯಕತ್ವದಲ್ಲಿ ಹೆಚ್ಚೆಚ್ಚು ಮಂದಿ ತೊಡಗಿಸಿಕೊಳ್ಳುವುದು ಬಲವಾದ ಮತ್ತು ಹೆಚ್ಚು ವೈವಿಧ್ಯಮಯ ರಾಷ್ಟ್ರವಾಗಿ ರೂಪುಗೊಳ್ಳಲು ಸಹಾಯ ಮಾಡುತ್ತದೆ ಎಂದು ಒತ್ತಿಹೇಳುತ್ತಾರೆ. "ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಅವರ ಕುಂದುಕೊರತೆಗಳನ್ನು ಪರಿಹರಿಸಲು ಸಾಧ್ಯ" ಎಂದು ಸ್ವಾತಿ ಪ್ರತಿಪಾದಿಸುತ್ತಾರೆ. ರಾಜಕೀಯ ಪ್ರಾತಿನಿಧ್ಯದಲ್ಲಿ ಲಿಂಗ ಅಂತರವನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳು, ತರಬೇತಿ ಕಾರ್ಯಕ್ರಮಗಳು, ಸಮಾನ ಸಂಪನ್ಮೂಲ ವಿತರಣೆ ಮತ್ತು ನೀತಿ ಅನುಷ್ಠಾನದಂತಹ ಸಮಗ್ರ ಕ್ರಮಗಳಿಗೆ ಅವರು ಕರೆ ನೀಡಿದರು.

ಈ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಹೊಂದಿದ್ದರೂ, ಮಹಿಳಾ ಅಭ್ಯರ್ಥಿಗಳ ಕೊರತೆಯು ಕಳವಳಕಾರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com