ಲೋಕಸಭೆ ಚುನಾವಣೆ 2024: RSS ಕ್ಷಮೆಯಾಚಿಸಿದ ಹಾಸನ JDS ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಹಾಸನ: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.

ಜೆಡಿಎಸ್ ಯುವ ಕಾರ್ಯಕರ್ತರು ಎಚ್ಚೆತ್ತುಕೊಂಡರೆ ಅವರು (ಆರ್‌ಎಸ್ಎಸ್ ಮತ್ತು ಪದಾಧಿಕಾರಿಗಳು) ಓಡಿ ಹೋಗುತ್ತಾರೆ ಎಂದು ಪ್ರಜ್ವಲ್ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆರ್‌ಎಸ್‌ಎಸ್ ಅನ್ನು ವ್ಯಂಗ್ಯವಾಡಿದ ಪ್ರಜ್ವಲ್, ಜೆಡಿಎಸ್ ಯುವ ಕಾರ್ಯಕರ್ತರನ್ನು ಸಿಂಹಗಳಿಗೆ ಹೋಲಿಸಿದ್ದರು.

ಬ್ರಾಹ್ಮಣ ಸಮುದಾಯದವರು ಉಪಸ್ಥಿತರಿದ್ದ ಹಾಸನದಲ್ಲಿ ಚುನಾವಣಾ ಪ್ರಚಾರದ ವೇಳೆ ಕ್ಷಮೆಯಾಚಿಸಿದ ಪ್ರಜ್ವಲ್, ತನಗೆ ಆರೆಸ್ಸೆಸ್ ಮತ್ತು ಅದರ ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತಿಳಿದಿಲ್ಲ. ಅಜ್ಞಾನದಿಂದ ಆರ್‌ಎಸ್‌ಎಸ್ ಬಗ್ಗೆ ಈ ಹೇಳಿಕೆ ನೀಡಿದ್ದೇನೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ಆದರೆ, ಇವತ್ತು ಅರಿವಾಗಿದೆ. ಹೀಗಾಗಿ, ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ನಂತರ, ಆರೆಸ್ಸೆಸ್ ಮತ್ತು ಅದರ ಕಾರ್ಯಕರ್ತರು ಏನನ್ನೂ ನಿರೀಕ್ಷಿಸದೆ ಸಮಾಜ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂಬುದನ್ನು ತಾನು ಅರಿತುಕೊಂಡಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು; ಬಿಜೆಪಿ ನಾಯಕ

ಪ್ರಜ್ವಲ್ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡ ಹಾಗೂ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಟಿಸಿ ಅನಂತಸುಬ್ಬರಾವ್, ಹಾಸನ ಜಿಪಂ ಮಾಜಿ ಅಧ್ಯಕ್ಷ ಸತ್ಯನಾರಾಯಣ, ಬಿಜೆಪಿ ಮುಖಂಡ ಹಾಗೂ ಅರಸೀಕೆರೆ ಟಿಎಂಸಿ ಮಾಜಿ ಅಧ್ಯಕ್ಷ ಎನ್‌ಡಿ ಪ್ರಸಾದ್ ಅವರ ಸಮ್ಮುಖದಲ್ಲಿ ಪ್ರಜ್ವಲ್ ಕ್ಷಮೆಯಾಚಿಸಿದರು.

ಪ್ರಜ್ವಲ್ ರೇವಣ್ಣ
ಲೋಕಸಭಾ ಚುನಾವಣೆ: ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ!

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಈ ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರು, ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ. ಕಳೆದ ಐದು ವರ್ಷಗಳಲ್ಲಿ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ. ಯುವಕ ನಡೆಯುವಾಗ ಎಡವುತ್ತಾನೆ. ಈಗ ಎಡವಿರಬಹುದು. ತಪ್ಪು ತಿದ್ದಿಕೋ‌ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿ ಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com