ದಾವಣಗೆರೆ ಲೋಕಸಭಾ ಕ್ಷೇತ್ರ 2024: ಹಳೆ ರಾಜಕೀಯ ಕುಟುಂಬಗಳಿಂದ ಹೊಸ ಅಭ್ಯರ್ಥಿಗಳಿಗೆ ಮಣೆ!

ಹಲವು ಚರ್ಚೆ, ಗೊಂದಲಗಳ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿಲ್ಲೆಯ ಹಳೆ ರಾಜಕೀಯ ಕುಟುಂಬದ ಹೊಸ ಮುಖಗಳನ್ನು ಕಣಕ್ಕಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಾವಣಗೆರೆ: ಹಲವು ಚರ್ಚೆ, ಗೊಂದಲಗಳ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿಲ್ಲೆಯ ಹಳೆ ರಾಜಕೀಯ ಕುಟುಂಬದ ಹೊಸ ಮುಖಗಳನ್ನು ಕಣಕ್ಕಿಳಿಸಿದೆ.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದರೆ, ಬಿಜೆಪಿ ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕಣಕ್ಕಿಳಿಸಿದೆ. ದಾವಣಗೆರೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಪ್ರಚಾರ ಮುಗಿಲುಮುಟ್ಟಿದೆ. ಮಧ್ಯ ಕರ್ನಾಟಕ ಕ್ಷೇತ್ರದಾದ್ಯಂತ ಇಬ್ಬರೂ ಅಭ್ಯರ್ಥಿಗಳು ಸಂಚರಿಸುತ್ತಿದ್ದಾರೆ.

ಈ ಹಿಂದೆ ಕರ್ನಾಟಕದ ಕೈಗಾರಿಕಾ ಕೇಂದ್ರ ಮತ್ತು ಮ್ಯಾಂಚೆಸ್ಟರ್ ಎಂದು ಕರೆಯಲಾಗುತ್ತಿದ್ದ ದಾವಣಗೆರೆಯಲ್ಲಿ ಆಂಜನೇಯ ಕಾಟನ್ ಮಿಲ್ ಸೇರಿದಂತೆ ಜಿಲ್ಲೆಯ ಬಹುತೇಕ ಕೈಗಾರಿಕೆಗಳು ಅಂಗಡಿ ಮುಚ್ಚಿರುವುದರಿಂದ ಉದ್ಯೋಗ ಅರಸಿ ಜನರು ಬೇರೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ, ದಾವಣಗೆರೆ ಇಂದಿಗೂ ಶಿಕ್ಷಣದ ಪ್ರಮುಖ ಕೇಂದ್ರವಾಗಿದೆ.

ವಿಮಾನ ನಿಲ್ದಾಣ, ಉದ್ಯೋಗಕ್ಕೆ ಮತದಾರರ ಓಲೈಕೆ: ಜಿಲ್ಲೆಯ ಮತದಾರರು ತಮ್ಮ ಸಂಸದರು ಜಿಲ್ಲೆಗೆ ವಿಮಾನ ನಿಲ್ದಾಣವನ್ನು ಮಂಜೂರು ಮಾಡಿ, ಸಾಫ್ಟ್‌ವೇರ್ ಪಾರ್ಕ್ ನ್ನು ವಿಸ್ತರಿಸಬೇಕು, ವಿಶೇಷ ಆರ್ಥಿಕ ವಲಯಗಳನ್ನು ರಚಿಸಬೇಕು, ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಬೇಕು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಇದರಿಂದ ದಾವಣಗೆರೆಗೆ ಕೈಗಾರಿಕಾ ಕೇಂದ್ರ ಎಂಬ ಪಟ್ಟವನ್ನು ಮರಳಿ ಪಡೆಯಬೇಕು ಎಂದು ಕ್ಷೇತ್ರದ ಮತದಾರರು ಬಯಸುತ್ತಾರೆ.

ಈ ಹಿಂದೆ ನಡೆದ 12 ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಆರು ಬಾರಿ ಜಯಭೇರಿ ಬಾರಿಸಿದ್ದವು. 1999ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿದೆ.

ಕ್ಷೇತ್ರವು ಸಮಾನ ಸಂಖ್ಯೆಯ ವೀರಶೈವ-ಲಿಂಗಾಯತರು ಮತ್ತು ಕುರುಬರಿಗೆ ನೆಲೆಯಾಗಿದೆ, ನಂತರ ವಾಲ್ಮೀಕಿ ನಾಯಕರು, ಮುಸ್ಲಿಮರು, ದಲಿತರು, ಉಪ್ಪಾರರು, ದೇವಾಂಗಗಳು ಮತ್ತು ಇತರ ಸಮುದಾಯಗಳು.

ಸಾಂದರ್ಭಿಕ ಚಿತ್ರ
ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಷ್ಟೇ ಲಾಯಕ್ಕು: ಶಾಮನೂರು ಶಿವಶಂಕರಪ್ಪ ಹೇಳಿಕೆ, ವ್ಯಾಪಕ ಟೀಕೆ

ದಾವಣಗೆರೆ ಕ್ಷೇತ್ರವು ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಮಾಯಕೊಂಡ, ಚನ್ನಗಿರಿ, ಜಗಳೂರು, ಹರಿಹರ, ಹರಪನಹಳ್ಳಿ ಮತ್ತು ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಹರಿಹರ ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ಇದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಅವರ ಆತ್ಮವಿಶ್ವಾಸಕ್ಕೆ ಇಂಬು ನೀಡಿದೆ. ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರು ತಮ್ಮ ಪತಿ ಹಾಗೂ ಹಾಲಿ ಬಿಜೆಪಿ ಸಂಸದ ಸಿದ್ದೇಶ್ವರ ಅವರು ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಗಳ ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೇಲೆ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ.

2014ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಹಾಲಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ ವಿರುದ್ಧ 17,602 ಮತಗಳ ಅಂತರದಿಂದ ಸಿದ್ದೇಶ್ವರ ಗೆಲುವು ಸಾಧಿಸಿದ್ದರು. 2019ರಲ್ಲಿ ಮತ್ತೆ ಸಿದ್ದೇಶ್ವರ ಕಾಂಗ್ರೆಸ್‌ನ ಎಚ್‌ಬಿ ಮಂಜಪ್ಪ ವಿರುದ್ಧ 1,69,702 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಬಂಡಾಯ ಸಮಸ್ಯೆ: ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಂಡಾಯ ಎದುರಿಸುತ್ತಿವೆ. ಕಾಂಗ್ರೆಸ್ ಪಾಳಯದಲ್ಲಿ ಶಿಕ್ಷಣ ತಜ್ಞ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಬಲ ಬೆಂಬಲಿಗ ಜಿ.ಬಿ.ವಿನಯ್ ಕುಮಾರ್ ಅವರು ಪಕ್ಷದ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸಿದ್ದರಾಮಯ್ಯ, ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಎಸ್‌ಎಸ್‌ ಮಲ್ಲಿಕಾರ್ಜುನ ಮಧ್ಯಸ್ಥಿಕೆಯಿಂದ ಬಂಡಾಯ ಶಮನಗೊಂಡಿತು. ಆದರೆ, ವಿನಯ್ ಕುಮಾರ್, ಶೀಘ್ರದಲ್ಲೇ ತಮ್ಮ ಬೆಂಬಲಿಗರನ್ನು ಭೇಟಿ ಮಾಡಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಕರೆ ಮಾಡುವುದಾಗಿ ವಿಡಿಯೋವೊಂದರಲ್ಲಿ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
Lok Sabha election 2024: ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಈಗ ವಿಷಯವೇ ಅಲ್ಲ!

ಬಿಜೆಪಿ ಪಾಳಯದಲ್ಲಿ ಹಾಲಿ ಸಂಸದ ಸಿದ್ದೇಶ್ವರ ಅಥವಾ ಅವರ ಕುಟುಂಬದ ಯಾರನ್ನಾದರೂ ಕಣಕ್ಕಿಳಿಸಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ, ಪಕ್ಷವು ಅವರ ಪತ್ನಿ ಗಾಯತ್ರಿ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಚಿವ ಎಸ್‌ಎ ರವೀಂದ್ರನಾಥ್ ಮತ್ತು ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಬಂಡಾಯವೆದ್ದಿದೆ. ಆದರೆ, ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಡಾಯ ಶಮನಗೊಳಿಸಿದ್ದಾರೆ.

ಈ ಬೆಳವಣಿಗೆಗಳ ನಡುವೆ ಹಿರಿಯ ಕಾಂಗ್ರೆಸ್ಸಿಗ ಹಾಗೂ ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅವರು ಗಾಯತ್ರಿ ಅಭ್ಯರ್ಥಿತನದ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಈಗ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಬಂಡಾಯ ಶಮನಗೊಂಡಿದ್ದು, ಎಲ್ಲರ ಕಣ್ಣು ಮತದಾನ ದಿನದತ್ತ ನೆಟ್ಟಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಬಿಜೆಪಿಯಿಂದ ಸೀಟು ಕಿತ್ತುಕೊಳ್ಳಲಿದೆಯೇ ಅಥವಾ ಕೇಸರಿ ಪಕ್ಷ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಲಿದೆಯೇ ಎಂಬುದು ಜೂನ್ 4 ರಂದು ಮತ ಎಣಿಕೆಯಾದಾಗ ಮಾತ್ರ ತಿಳಿಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com