ಹಾಸನ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ರನ್ನು ಭೇಟಿ ಮಾಡಿ ಜೆಡಿಎಸ್ ಗೆ ಶಾಕ್ ಕೊಟ್ಟ ಪ್ರೀತಂ ಗೌಡ ಬೆಂಬಲಿಗರು!

ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ಆಪ್ತ ಉದ್ದೂರ್ ಪುರುಷೋತ್ತಮ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.
ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡ
ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡTNIE

ಹಾಸನ: ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ಆಪ್ತ ಉದ್ದೂರ್ ಪುರುಷೋತ್ತಮ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಹಾಸನದಿಂದ ಪ್ರೀತಂ ಗೌಡ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪುರುಷೋತ್ತಮ್ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಶ್ರೇಯಸ್ ಪಟೇಲ್ ಅವರನ್ನು ಭೇಟಿ ಮಾಡಿದರು. ಪುರುಷೋತ್ತಮ್ ಅವರು ಶ್ರೇಯಸ್‌ಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಭರವಸೆ ನೀಡಿದ್ದಾರೆ. ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ರಾಧಾಮೋನನ್ ದಾಸ್ ಅಗರ್ವಾಲ್ ಇತ್ತೀಚೆಗೆ ಪ್ರೀತಂರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರೀತಂ ಮತ್ತು ಪ್ರಜ್ವಲ್ ನಡುವಿನ ಭಿನ್ನಾಭಿಪ್ರಾಯವನ್ನು ಸರಿಪಡಿಸುವ ಭರವಸೆಯನ್ನು ಜೆಡಿಎಸ್ ನಾಯಕರಿಗೆ ನೀಡಿದ ಬೆನ್ನಲ್ಲೇ ಪುರುಷೋತ್ತಮ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಮೈಸೂರಿನಲ್ಲಿ ಎನ್‌ಡಿಎ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಪರ ಪ್ರಚಾರ ನಡೆಸುತ್ತಿರುವ ಪ್ರೀತಂ ಗೌಡ ಬಳಿ ಪ್ರಜ್ವಲ್ ರೇವಣ್ಣ ಅವರನ್ನು ಕರೆದೊಯ್ದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಇತ್ತೀಚೆಗೆ ಹಾಸನಕ್ಕೆ ಬಂದಿದ್ದ ರಾಧಾಮೋಹನ್ ದಾಸ್ ಅಗರ್‌ವಾಲ್ ಜೆಡಿಎಸ್ ನಾಯಕರಿಗೆ ಭರವಸೆ ನೀಡಿದ್ದರು. ಆದರೆ ಬಿಜೆಪಿಯ ಹಿರಿಯ ನಾಯಕರು ಸಮಸ್ಯೆ ಬಗೆಹರಿಸಲು ಆಸಕ್ತಿ ತೋರದ ಕಾರಣ ಪ್ರೀತಂ ಗೌಡ ಮತ್ತು ಪ್ರಜ್ವಲ್ ರೇವಣ್ಣ ನಡುವಿನ ಭಿನ್ನಾಭಿಪ್ರಾಯ ಅಂತ್ಯ ಕಾಣುತ್ತಿಲ್ಲ. ಈ ಬೆಳವಣಿಗೆಯಿಂದ ಸ್ಥಳೀಯ ಮುಖಂಡರು ಕಂಗಾಲಾಗಿದ್ದಾರೆ. ಹಿರಿಯ ನಾಯಕರ ಮಾತು ಕೇಳುವ ಸ್ಥಿತಿಯಲ್ಲಿ ಯುವ ಕಾರ್ಯಕರ್ತರು ಇಲ್ಲ ಎಂದು ಹೆಸರು ಹೇಳಲಿಚ್ಚಿಸದ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡ
ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಗನ್ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಸಿದ್ದರಾಮಯ್ಯಗೆ ಮಾಲಾರ್ಪಣೆ, ಆತಂಕ ಸೃಷ್ಟಿ!

ಪ್ರಿಂಟಿಂಗ್ ಪ್ರೆಸ್ ವಶಪಡಿಸಿಕೊಂಡ ಫ್ಲೈಯಿಂಗ್ ಸ್ಕ್ವಾಡ್

ಜಿಲ್ಲಾ ಚುನಾವಣಾಧಿಕಾರಿಯಿಂದ ಅನುಮತಿ ಪಡೆಯದೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಕರಪತ್ರಗಳನ್ನು ಮುದ್ರಿಸಿದ ಆರೋಪದ ಮೇಲೆ ಹಾಸನ ನಗರದಲ್ಲಿ ಬಾಲಾಜಿ ಎಂಬುವರಿಗೆ ಸೇರಿದ ಪ್ರಿಂಟಿಂಗ್ ಪ್ರೆಸ್ ಘಟಕವನ್ನು ಚುನಾವಣಾ ಕರ್ತವ್ಯದಲ್ಲಿದ್ದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಜಪ್ತಿ ಮಾಡಿದೆ. ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ ರಕ್ಷಿತ್ ನೀಡಿದ ದೂರಿನ ಮೇರೆಗೆ ಪಟ್ಟಣ ಪೊಲೀಸರು ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಹಾಗೂ ಪ್ರಿಂಟಿಂಗ್ ಪ್ರೆಸ್ ಮಾಲೀಕ ಬಾಲಾಜಿ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಿಂಟಿಂಗ್ ಪ್ರೆಸ್‌ಗೆ ಬೀಗ ಹಾಕಿದ ಬಳಿಕ ಅಧಿಕಾರಿಗಳು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com