ಮತ ಕೇಳಲು ಬಂದ ಸಿಎಂ ಪುತ್ರ ಯತೀಂದ್ರ ಮೇಲೆ ಗ್ರಾಮಸ್ಥರ ಆಕ್ರೋಶ; ಚುನಾವಣಾ ಬಹಿಷ್ಕಾರದ ಬೆದರಿಕೆ!

ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಗ್ರಾಮಸ್ಥರಿಂದ ಯತೀಂದ್ರ ಸಿದ್ದರಾಮಯ್ಯಗೆ ತರಾಟೆ
ಗ್ರಾಮಸ್ಥರಿಂದ ಯತೀಂದ್ರ ಸಿದ್ದರಾಮಯ್ಯಗೆ ತರಾಟೆ

ಮೈಸೂರು: ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಚುನಾವಣಾ ಬಹಿಷ್ಕಾರದ ಬೆದರಿಕೆ ಹಾಕಿರುವ ಪ್ರತಿಭಟನಾಕಾರರು, ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

ಸಮಸ್ಯೆಯೇನು?: ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದೆ.

ಈ ಮಧ್ಯೆ, ಚುನಾವಣಾ ಪ್ರಚಾರಕ್ಕಾಗಿ ಮಲ್ಲುಪುರಕ್ಕೆ ಭೇಟಿ ನೀಡಿದ ಯತೀಂದ್ರ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.

ಗ್ರಾಮಸ್ಥರಿಂದ ಯತೀಂದ್ರ ಸಿದ್ದರಾಮಯ್ಯಗೆ ತರಾಟೆ
ಅಮಿತ್ ಶಾ ಗೂಂಡಾ, ಅವರ ವಿರುದ್ಧ ಕ್ರಿಮಿನಲ್ ಕೇಸ್ ಗಳಿವೆ: ಯತೀಂದ್ರ ಸಿದ್ದರಾಮಯ್ಯ

ಚುನಾವಣೆಗೋಸ್ಕರ ಬಂದಿದ್ದೀರಿ: ಪ್ರತಿಭಟನಾ ನಿರತ ರೈತರು ಸಿಟ್ಟಾಗುತ್ತಿದ್ದಂತೆಯೇ ಅವರನ್ನು ಓಲೈಸಲು ಯತೀಂದ್ರ ಮುಂದಾದರು. ಆದರೆ, ಇದನ್ನು ಲೆಕ್ಕಿಸದ ರೈತರು, ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ‌ ವ್ಯಕ್ತಪಡಿಸಿದರು. ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಇದನ್ನು ಕೇಳುತ್ತಿದ್ದಂತೆಯೇ ಕುಪಿತಗೊಂಡ ಪ್ರತಿಭಟನಾಕಾರರು, ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವೇ ಎಂದು ಕೆರಳಿ ಕೆಂಡವಾದರು.

ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದರು. ಪ್ರತಿಭಟನಕಾರರಿಗೆ ಉತ್ತರಿಸಲಾಗದೆ ಯತೀಂದ್ರ ಅಲ್ಲಿಂದ ವಾಪಸಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com