ಬಿಜೆಪಿ ಭದ್ರಕೋಟೆ ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ ಭರ್ಜರಿ ಮತಬೇಟೆ!

ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಶತಾಯಗತಾಯ ಯತ್ನಗಳನ್ನು ನಡೆಸುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವಾದ ಸೋಮವಾರವೂ...
ಸೌಮ್ಯಾರೆಡ್ಡಿ ಪರ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ.
ಸೌಮ್ಯಾರೆಡ್ಡಿ ಪರ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ.
Updated on

ಬೆಂಗಳೂರು: ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಶತಾಯಗತಾಯ ಯತ್ನಗಳನ್ನು ನಡೆಸುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವಾದ ಸೋಮವಾರವೂ ಬೆಂಗಳೂರಿನಲ್ಲಿ ಪ್ರಚಾರ ನಡೆಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಬೆಂಗಳೂರು ಲೋಕಸಭಾ ಕ್ಷೇತ್ರಗಳತ್ತ ಹೆಚ್ಚಿನ ಗಮನ ಹರಿಸಿದ್ದು, ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಹೊರತುಪಡಿಸಿದರೆ, ಇನ್ನುಳಿದ ಬೆಂಗಳೂರು ಉತ್ತರ (ಡಿವಿ ಸದಾನಂದಗೌಡ), ಬೆಂಗಳೂರು ದಕ್ಷಿಣ (ತೇಜಸ್ವಿ ಸೂರ್ಯ) ಮತ್ತು ಬೆಂಗಳೂರು ಕೇಂದ್ರ (ಪಿಸಿ ಮೋಹನ್)ಕ್ಷೇತ್ರಗಳನ್ನು ಬಿಜೆಪಿ ಸಂಸದರು ಪ್ರತಿನಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರೂ ಕ್ಷೇತ್ರವನ್ನು ಕಮಲ ಪಾಳಯದಿಂದ ಕಸಿದುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ.

ಇದರಂತೆ ಕಾಂಗ್ರೆಸ್‌ನ ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ಮುಂದುವರಿಸಿದ ಸಿದ್ದರಾಮಯ್ಯ ಅವರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ ಕಾಂಗ್ರೆಸ್‌ಗೆ ಅನ್ಯಾಯವಾಗಿದ್ದು, ಕೆಲವೇ ಮತಗಳಿಂದ ಸೋಲಾಗಿದೆ. ಆದರೆ, ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.

ಸೌಮ್ಯಾರೆಡ್ಡಿ ಪರ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ.
ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಗನ್ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಸಿದ್ದರಾಮಯ್ಯಗೆ ಮಾಲಾರ್ಪಣೆ, ಆತಂಕ ಸೃಷ್ಟಿ!

ನ್ಯಾಯಾಲಯದಲ್ಲಿ ಸೌಮ್ಯಾ ಅವರಿಗೆ ನ್ಯಾಯ ದೊರಕುವಂತೆ ಜನರು ಮಾಡಬೇಕು. ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲು ವಿಫಲರಾದ ಅವರು ಯಾವ ಆಧಾರದ ಮೇಲೆ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.

ಬಳಿಕ ನಂತರ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರವೂ ಸಿಎಂ ಪ್ರಚಾರ ನಡೆಸಿದರು.

ಈ ವೇಳೆ ಹಾಲಿ ಸಂಸದ ಪಿಸಿ ಮೋಹನ್‌ ಅವರನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಪಿಸಿ ಮೋಹನ್ ಈ ಕ್ಷೇತ್ರದಿಂದ ಹಲವಾರು ಬಾರಿ ಗೆದ್ದಿದ್ದಾರೆ, ಆದರೆ ಸಂಸತ್ತಿನಲ್ಲಿ ಬೆಂಗಳೂರಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಪ್ರಸ್ತಾಪಿಸಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸುವಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಇನ್ನು ಡಿಕೆ ಶಿವಕುಮಾರ್ ಅವರೂ ಕೂಡ ಬೆಂಗಳೂರು ಲೋಕಸಭಾಕ್ಷೇತ್ರದ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಗರದ ಅಪಾರ್ಟ್‌ಮೆಂಟ್ ನಿವಾಸಿಗಳನ್ನು ಭೇಟಿಯಾಗಿದ್ದರ ಅವರು, ಸೋಮವಾರ ಗಾಂಧಿನಗರ, ರಾಜಾಜಿನಗರ, ಸಿ.ವಿ.ರಾಮನ್ ನಗರದಲ್ಲಿ ರೋಡ್ ಶೋಗಳಲ್ಲಿ ಪಾಲ್ಗೊಂಡು ಮನ್ಸೂರ್ ಪರ ಮತ ಯಾಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com