ಯಾರೇ ಕುಕ್ಕರ್ ಹಂಚಿದ್ರೂ ವಿಸಿಲ್ ಕೂಗೋದು ಮಾತ್ರ ಮೋದಿ: ಬಿಜೆಪಿ

ರಾಜ್ಯದಲ್ಲಿ ಯಾರೇ ಕುಕ್ಕರ್ ಹಂಚಿದರೂ ವಿಸಿಲ್ ಕೂಗೋದು ಮಾತ್ರ ನಮ್ಮ ಮೋದಿ. ಜನಗಳು ಡಿಕೆ ಸುರೇಶ್ ಗೆ ಯಾಕೆ ಮತ ಹಾಕುತ್ತಾರೆ. ಅವರು ಏನು ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮಂಗಳವಾರ ಪ್ರಶ್ನಿಸಿದೆ.
ಬಿಜೆಪಿ
ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಯಾರೇ ಕುಕ್ಕರ್ ಹಂಚಿದರೂ ವಿಸಿಲ್ ಕೂಗೋದು ಮಾತ್ರ ನಮ್ಮ ಮೋದಿ. ಜನಗಳು ಡಿಕೆ ಸುರೇಶ್ ಗೆ ಯಾಕೆ ಮತ ಹಾಕುತ್ತಾರೆ. ಅವರು ಏನು ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮಂಗಳವಾರ ಪ್ರಶ್ನಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶ್ವತ್ಥ್ ನಾರಾಯಣ್ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪ್ಯಾರಾ ಮಿಲಿಟರಿ ನಿಯೋಜನೆ ಆಗಬೇಕು. ಭಯದ ವಾತಾವರಣ ಇರಬಾರದು, ಭಯ ಇಲ್ಲದೇ ಜನ ಮತ ಹಾಗಬೇಕು. ಶಾಂತಿಯುತ ಮತದಾನ ಆಗಬೇಕು. ಈ ಕಾರಣಕ್ಕೆ ನಾವು ಪ್ಯಾರಾ ಮಿಲಿಟರಿ ದಳ ನಿಯೋಜನೆಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಭಯದ ವಾತಾವರಣ ಸೃಷ್ಟಿಸುತ್ತಿದೆ. ಭಯದ ವಾತಾವರಣ ಇದ್ದರೇ ಅವರಿಗೆ ಶಕ್ತಿ. ಜನರನ್ನ ಹತ್ತಿಕ್ಕುವುದು, ಗಲಾಟೆ ಸೃಷ್ಟಿಸೋದು ಮಾಡುತ್ತಿದ್ದಾರೆಂದು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ
ಬಿವೈ ರಾಘವೇಂದ್ರರೊಂದಿಗೆ ಆರ್‌ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ!

ದೇಶದಲ್ಲಿ ಈಗ ಲೋಕಸಭೆ ರೂಪದಲ್ಲಿ ಧರ್ಮ-ಅಧರ್ಮದ ಯುದ್ಧ ನಡೆಯುತ್ತಿದೆ. ದೇಶದ ಜನರ ವಿಶ್ವಾಸ ಗಳಿಸಿರುವ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕಂದು ಜನ ಬಯಸಿದ್ದಾರೆ. ಮೋದಿಯವರ ಕೈ ಬಲಪಡಿಸಲು ಎಲ್ಲ 28 ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ. ಈ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಬಾರಿ ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಗೆದ್ದಿತ್ತು. ಅವರ ವೈಯಕ್ತಿಕ ಪ್ರತಿಷ್ಠೆ ಜನಕ್ಕೆ ಗೊತ್ತಿದೆ ಎಂದು ಹೇಳಿದರು.

ಎನ್‍ಡಿಎಯಿಂದ ಮಾತ್ರ ದೇಶಕ್ಕೆ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಯುಪಿಎಯಿಂದ ಸಾಧ್ಯವಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಗ್ಯಾರಂಟಿಗಳನ್ನು ಮುಂದಿಟ್ಟುಕ್ಕೊಂಡು, ಸುಳ್ಳು ಹೇಳಿಕೊಂಡು ಕಾಂಗ್ರೆಸ್ ಮತ ಕೇಳುತ್ತಿದ. ಬೆಂಗಳೂರು ಗ್ರಾಮಾಂತರಕ್ಕೆ ಡಿ.ಕೆ ಬ್ರದರ್ಸ್ ಕೊಡುಗೆ ಏನು?. ಯಾವುದೇ ಕ್ಷೇತ್ರದಲ್ಲೂ ಅವರು ಕೆಲಸ ಮಾಡಿಲ್ಲ. ಕನಕಪುರ ಅತ್ಯಂತ ಹಿಂದುಳಿದ ತಾಲೂಕು ಆಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com