ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆ

ಕೇಸರಿ ಪಕ್ಷ ಬಿಜೆಪಿಯಲ್ಲಿದ್ದರೂ ಅಂತರ ಕಾಯ್ದುಕೊಂಡು ಬಂದಿರುವ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಮತ್ತು ವಿವೇಕ್ ಹೆಬ್ಬಾರ್(ಸಂಗ್ರಹ ಚಿತ್ರ)
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಮತ್ತು ವಿವೇಕ್ ಹೆಬ್ಬಾರ್(ಸಂಗ್ರಹ ಚಿತ್ರ)

ಕಾರವಾರ: ಕೇಸರಿ ಪಕ್ಷ ಬಿಜೆಪಿಯಲ್ಲಿದ್ದರೂ ಅಂತರ ಕಾಯ್ದುಕೊಂಡು ಬಂದಿರುವ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ 2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಹಲವು ಸಭೆಗಳನ್ನೂ ನಡೆಸಿದ್ದ ಹೆಬ್ಬಾರ್, ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಉಳಿದಿದ್ದರು. ಇತ್ತೀಚೆಗೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಸುದ್ದಿಯಾಗಿದ್ದರು.

ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಮತ್ತು ವಿವೇಕ್ ಹೆಬ್ಬಾರ್(ಸಂಗ್ರಹ ಚಿತ್ರ)
ಪುತ್ರನ ಮೂಲಕ ಕ್ರಮಬದ್ಧ ರಾಜೀನಾಮೆ ಪತ್ರ ಸಲ್ಲಿಸಿದ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್

ಈಗ ಲೋಕಸಭಾ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿವರಾಂ ಹೆಬ್ಬಾರ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com