ರಾಹುಲ್ ಗಾಂಧಿ ಹೆಸರು ಹೇಳಲು ಕಾಂಗ್ರೆಸ್ ನಾಯಕರಿಗೇ ಮುಜುಗರ: ಮಾಜಿ ಸಿಎಂ ಯಡಿಯೂರಪ್ಪ

ಮೊದಲ ಹಂತದ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ರಾಜ್ಯದಲ್ಲಿ ಪ್ರಚಾರದ ಅಖಾಡ ರಂಗೇರಿದ್ದು, ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ, ಸಭೆ, ಸಮಾರಂಭಗಳಲ್ಲಿ ತೊಡಗಿಸಿಕೊಂಡಿವೆ.
ಬಿಎಸ್ ಯಡಿಯೂರಪ್ಪ ಮತ್ತಿತರರು
ಬಿಎಸ್ ಯಡಿಯೂರಪ್ಪ ಮತ್ತಿತರರು

ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ರಾಜ್ಯದಲ್ಲಿ ಪ್ರಚಾರದ ಅಖಾಡ ರಂಗೇರಿದ್ದು, ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ, ಸಭೆ, ಸಮಾರಂಭಗಳಲ್ಲಿ ತೊಡಗಿಸಿಕೊಂಡಿವೆ.

ನಗರದಲ್ಲಿಂದು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಹಿರಿಯ ಸಂಸದ ರಾಹುಲ್ ಗಾಂಧಿ ಅವರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂಬುದನ್ನು ಕಾಂಗ್ರೆಸ್ ಮರೆತಿದೆ ಎಂದು ಟೀಕಿಸಿದರು.

ಬಿಎಸ್ ಯಡಿಯೂರಪ್ಪ ಮತ್ತಿತರರು
ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸೀಟು ಗೆದ್ದು, ಮೋದಿಗೆ ಉಡುಗೊರೆಯಾಗಿ ನೀಡುತ್ತೇವೆ: ಯಡಿಯೂರಪ್ಪ

“ಕಾಂಗ್ರೆಸ್‌ಗೆ ವಿಶ್ವಾಸಾರ್ಹ ನಾಯಕತ್ವ ಮತ್ತು ಸಾಧನೆಗಳ ಕೊರತೆಯಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಅನುದಾನಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ. ಆ ಮೂಲಕ ಅಧಿಕಾರಕ್ಕೆ ಬರುತ್ತೇವೆ ಎಂಬುದು ಅವರ ಭ್ರಮೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಕಳೆದ 10 ವರ್ಷಗಳ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳ ಆಧಾರದ ಮೇಲೆ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು. 2014ರಲ್ಲಿ 15.54 ಕೋಟಿ ಇದ್ದ ಭವಿಷ್ಯ ನಿಧಿ ಖಾತೆಗಳ ಸಂಖ್ಯೆ 2022ರಲ್ಲಿ 22.5 ಕೋಟಿಗೆ ಏರಿದೆ ಎಂದು ಕಾಂಗ್ರೆಸ್ ಯಾವುದೇ ಮಾಹಿತಿ ಇಲ್ಲದೆ ಎರಡು ಕೋಟಿ ಉದ್ಯೋಗ ಸೃಷ್ಟಿಯನ್ನು ಪ್ರಶ್ನಿಸುತ್ತಿದೆ ಎಂದು ಆರೋಪಿಸಿದರು. ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಏಳು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಯಡಿಯೂರಪ್ಪ ಹೇಳಿದರು.

ಬಿಎಸ್ ಯಡಿಯೂರಪ್ಪ ಮತ್ತಿತರರು
ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ: ಬಿಎಸ್ ಯಡಿಯೂರಪ್ಪ ಭವಿಷ್ಯ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಲಿ? ಕೈಗಾರಿಕೆಗಳ ಸ್ಥಾಪನೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಸೀಮಿತವಾಗಿದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಉದ್ಯೋಗ ಸೃಷ್ಟಿಸದೆ ಹೊಸ ದಾಖಲೆ ಮಾಡಿದೆ' ಎಂದು ಯಡಿಯೂರಪ್ಪ ಆರೋಪಿಸಿದರು.

ಪ್ರಧಾನಿ ಮೋದಿ ಅವರ ಸರ್ಕಾರದಲ್ಲಿ ಕಲಬುರಗಿ-ಬೀದರ್ ನಗರಗಳ ನಡುವಿನ ರೈಲುಮಾರ್ಗ ಪೂರ್ಣಗೊಂಡಿದೆ, ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕದ ಶೇ.95 ರಷ್ಟು ರೈಲ್ವೆ ಹಳಿಗಳು ಈಗ ವಿದ್ಯುದ್ದೀಕರಣಗೊಂಡಿವೆ ಮತ್ತು ರಾಜ್ಯದಲ್ಲಿ ಆರು ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ 54 ಲಕ್ಷ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 6,000 ರೂ.ಗಳನ್ನು ಪಡೆಯುತ್ತಿದ್ದಾರೆ. ತಾನೂ ಸಿಎಂ ಆಗಿದ್ದಾಗ ಅದಕ್ಕೆ 4,000 ರೂ. ನೀಡಲಾಗುತಿತ್ತು. ಅದನ್ನು ಈಗ ಕಾಂಗ್ರೆಸ್ ಸರ್ಕಾರ ನಿಲ್ಲಿಸಿರುವುದು ಈಗ ಸರ್ಕಾರ ದಿವಾಳಿಯಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.

ವೈದ್ಯಕೀಯ ಕಾಲೇಜು ಸ್ಥಾಪನೆಯನ್ನು ಮರೆತುಬಿಡಿ, ರಾಜ್ಯದಲ್ಲಿ ಒಂದೇ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತೆರೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇದು ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಯಡಿಯೂರಪ್ಪ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com