ಖರ್ಗೆಗೆ ಚುನಾವಣಾ ತಯಾರಿ ವರದಿ ಸಲ್ಲಿಕೆ; ದಿಂಗಾಲೇಶ್ವರ ಸ್ವಾಮೀಜಿ ಬೆಂಬಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಿದರು.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣಾ ಸಿದ್ಧತೆ ಕುರಿತು ವರದಿ ಸಲ್ಲಿಸಿದ್ದೇನೆ. ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಏಪ್ರಿಲ್ 12 ರಂದು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಆ ಸಂದರ್ಭದಲ್ಲಿ ಖರ್ಗೆ ಅವರೊಂದಿಗೆ ಬರಲಿದ್ದಾರೆ ಎಂದರು.

ರಾಜ್ಯದ ಕೆಲವು ಭಾಗಗಳಲ್ಲಿ ಪ್ರಚಾರ ನಡೆಸಲು ಮಲ್ಲಿಕಾರ್ಜುನ ಖರ್ಗೆಯವರ ಸಮಯವನ್ನು ಸಹ ಪಡೆದರು.

ಡಿಕೆ ಶಿವಕುಮಾರ್
ರಾಜ್ಯದಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿಕೆ ಶಿವಕುಮಾರ್

ಈಮಧ್ಯೆ, ಆಂಧ್ರಪ್ರದೇಶದ ಪಿಸಿಸಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರು ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ತಮ್ಮ ರಾಜ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿರುವುದರಿಂದ ಪಕ್ಷದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

‘ದಿಂಗಾಲೇಶ್ವರ ಸ್ವಾಮೀಜಿಯನ್ನು ಬೆಂಬಲಿಸಲು ಸಾಧ್ಯವಿಲ್ಲ’

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಡಿಕೆ ಶಿವಕುಮಾರ್
ಧಾರವಾಡ ಲೋಕಸಭಾ ಕ್ಷೇತ್ರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿ ನಿರ್ಧಾರ!

'ನಾವು ಅವರನ್ನು ಬೆಂಬಲಿಸಿದರೆ, ನೇರವಾಗಿಯೇ ಬೆಂಬಲಿಸುತ್ತೇವೆ. ನಾವು ಗೌಪ್ಯವಾಗಿ ಏಕೆ ಬೆಂಬಲ ನೀಡಬೇಕು? ಹುಬ್ಬಳ್ಳಿ-ಧಾರವಾಡ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿ ಬಿ-ಫಾರಂ ನೀಡಿದ್ದೇವೆ. ಸ್ವಾಮೀಜಿ ಈ ಹಿಂದೆಯೇ ಈ ನಿರ್ಧಾರ ತೆಗೆದುಕೊಂಡಿದ್ದರೆ ಪರಿಸ್ಥಿತಿಯೇ ಬೇರೆಯಾಗಿರುತ್ತಿತ್ತು. ನಮ್ಮ ಅಭ್ಯರ್ಥಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ತತ್ವಗಳ ಮೇಲೆ ಸದಾ ಶ್ರಮಿಸುತ್ತಿರುವ ಸ್ವಾಮೀಜಿಯ ಬಗ್ಗೆ ನಮಗೆ ಗೌರವವಿದೆ' ಎಂದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿರುವ ಮೂರು ಕ್ಷೇತ್ರಗಳಲ್ಲಿಯೂ ಸೋಲು ಕಾಣಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಡಾ. ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ದೇವೇಗೌಡರು ನಾಲ್ಕು ಸ್ಥಾನಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಒಂದೇ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com