ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ವಿತರಣೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಹಿ ಇರುವ ಕಾಂಗ್ರೆಸ್‌ನ 'ಗ್ಯಾರೆಂಟಿ ಕಾರ್ಡ್'ಗಳನ್ನು ಮತದಾರರಿಗೆ ಹಂಚುವುದನ್ನು ತಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಬಿಜೆಪಿ ದೂರು ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಹಿ ಇರುವ ಕಾಂಗ್ರೆಸ್‌ನ 'ಗ್ಯಾರೆಂಟಿ ಕಾರ್ಡ್'ಗಳನ್ನು ಮತದಾರರಿಗೆ ಹಂಚುವುದನ್ನು ತಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಬಿಜೆಪಿ ದೂರು ಸಲ್ಲಿಸಿದೆ. ರಾಹುಲ್ ಗಾಂಧಿ ಮತ್ತು ಖರ್ಗೆ ಅವರ ಭಾವಚಿತ್ರ ಮತ್ತು ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ಯಾರಂಟಿ ಕಾರ್ಡ್ ಗಳಲ್ಲಿ QR ಕೋಡ್ ಸಹ ಒಳಗೊಂಡಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರಿಂದ ಅನಗತ್ಯ ಲಾಭ ಪಡೆಯಲು ಈ ರೀತಿ ಮಾಡಲಾಗುತ್ತಿದೆ. ಈ ಕಾರ್ಡ್‌ಗಳನ್ನು ದೇಶದಾದ್ಯಂತ ವಿತರಿಸಲು ಸಿದ್ಧತೆಗಳು ನಡೆಯುತ್ತಿವೆ. ಗ್ಯಾರಂಟಿ ಕಾರ್ಡ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಕ್ರಮವು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಂಬಂಧಿಸಿದ ವಿಷಯದ ಜೊತೆಗೆ, ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲು ಒಂದು ಸ್ವರೂಪವನ್ನು ಸಹ ಸಿದ್ಧಪಡಿಸಲಾಗಿದೆ. ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುವುದು ಅಪರಾಧ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತದಾರರಿಗೆ ‘ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌’ ವಿತರಣೆಯನ್ನು ನಿಲ್ಲಿಸುವ ಕುರಿತು ನಿರ್ದೇಶನ ನೀಡುವಂತೆ ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಸಿ.ಎನ್. ಅಶ್ವಥ್ ನಾರಾಯಣ್, ವಿವೇಕ್ ಎಸ್.ರೆಡ್ಡಿ, ಪ್ರಮುಖ್, ಕಾನೂನು ಮತ್ತು ಚುನಾವಣಾ ಸಮಿತಿ ಹಾಗೂ ಕಾನೂನು ಕೋಶದ ಸಂಚಾಲಕ ವಸಂತಕುಮಾರ್ ಅವರು ಆಯೋಗಕ್ಕೆ ದೂರು ಸಲ್ಲಿಸಿದರು.

ಸಾಂದರ್ಭಿಕ ಚಿತ್ರ
ಕಾಂಗ್ರೆಸ್​ ಗೆಲ್ಲಿಸಿದ ಗ್ಯಾರಂಟಿ ಕಾರ್ಡ್​: ಉಚಿತ ಭರವಸೆಗಳು ಜಾರಿಯಾಗುವುದೇ..? ಆರ್ಥಿಕ ತಜ್ಞರು ಹೇಳೋದೇನು...?

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಫೋಟೋವನ್ನು ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಿದ ಬಿಜೆಪಿ, ಕಾಂಗ್ರೆಸ್ ಪಕ್ಷದ ತನ್ನ ಪ್ರಣಾಳಿಕೆಯಲ್ಲಿ ಮಾಡಿದ ಭರವಸೆಗಳನ್ನು ಎತ್ತಿ ತೋರಿಸಿದೆ. ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳಾ ನ್ಯಾಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ವರ್ಷ ರೂ 1 ಲಕ್ಷ ಭತ್ಯೆ, ಯುವ ನ್ಯಾಯದಡಿ ಪ್ರತಿ ವಿದ್ಯಾವಂತ ಯುವಕರಿಗೆ ಉದ್ಯೋಗ ಮತ್ತು ಶಿಷ್ಯವೃತ್ತಿಯ ಸಮಯದಲ್ಲಿ ವಾರ್ಷಿಕ ರೂ 1 ಲಕ್ಷ ವೇತನ, ಕಿಸಾನ್ ನ್ಯಾಯ ಅಡಿಯಲ್ಲಿ ರೈತರ ಸಾಲ ಮನ್ನಾ ಮತ್ತು ಜಾತಿ ಗಣತಿ ಮತ್ತು ಶ್ರಮಿಕ ನ್ಯಾಯ ಅಡಿಯಲ್ಲಿ ದಿನಕ್ಕೆ ಕನಿಷ್ಠ 400 ರೂ. ಸೇರಿದಂತೆ ಮತದಾರರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಫೋನ್ ಸಂಖ್ಯೆ ಸೇರಿದಂತೆ ಎಲ್ಲಾ ವಿವರಗಳನ್ನು ಕೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com